BIG NEWS : ನಟ ದರ್ಶನ್ ಗೆ ‘ಜಾಮೀನು’ ನೀಡದಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ನಟ ದರ್ಶನ್ ಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವ್ರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವೆರ್ ದರ್ಶನ್ ಚಿಕಿತ್ಸೆಗೆಂದು 3 ತಿಂಗಳು ಜಾಮೀನು ಪಡೆದುಕೊಂಡಿದ್ದಾರೆ. ಜಾಮೀನಿನ ಅವಧಿ ವಿಸ್ತರಿಸುವಂತೆ ಕೇಳಿರುವುದು ನನಗೆ ಗೊತ್ತಿಲ್ಲ. ಸಾಕ್ಷ ಸಂಗ್ರಹದ ಬಳಿಕ ಹೆಚ್ಚುವರಿ ದೋಷಾರೋಪಪಟ್ಟಿ ಸಲ್ಲಿಸಲಾಗುವುದು ಎಂದು ಹೇಳಿದರು.

ಇನ್ನೂ,ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್, ಸರ್ಜರಿಗೆ ವೈದ್ಯರು ಸಲಹೆ ನೀಡಿದರೂ ಇನ್ನೂ ಸರ್ಜರಿಗೆ ಒಳಗಾಗಿಲ್ಲ. ಈ ನಡುವೆ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ಈ ವೇಳೆ ಎಸ್ ಪಿಪಿ, ದರ್ಶನ್ ವೈದ್ಯಕೀಯ ವರದಿಯ ಪ್ರತಿ ನಮಗೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪೊಲೀಸರು ಹೆಚ್ಚುವರಿ ಆರೋಪ ಪಟ್ಟಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಅರ್ಹತೆಯ ಮೇರೆಗೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸಬಹುದು ಎಂದು ತಿಳಿಸಿದ್ದು, ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read