ಬೆಂಗಳೂರು : ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ ಮಾಡಿದೆ.
ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಮುಗಿಯಲಿದೆ. ಅದಕ್ಕೂ ಮುನ್ನವೂ ಈ ಪ್ರಕ್ರಿಯೆ ಮುಗಿಯುವ ಸಂಭವ ಇದೆ. ಕೋರ್ಟ್ ಸೂಚಿಸಿದರೆ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಸಿದ್ಧ ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಜೋಯ್‌ಮಾಲ್ಯ ಬಾಗ್ನಿ ಅವರಿರುವ ಪೀಠವು ಸೋಮವಾರ ನಡೆಸಲಿದೆ.