HomeLatest News'ಮನರೇಗಾ' ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯಲ್ಲ : CM ಸಿದ್ದರಾಮಯ್ಯ

‘ಮನರೇಗಾ’ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯಲ್ಲ : CM ಸಿದ್ದರಾಮಯ್ಯ

ಬೆಂಗಳೂರು :   ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ್ದ “ನರೇಗಾ ಉಳಿಸಿ ಆಂದೋಲನ ಮತ್ತು ಲೋಕಭವನ ಚಲೋ” ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದ ಲಕ್ಷಾಂತರ ಬಡ ಕುಟುಂಬಗಳಿಗೆ ವರ್ಷವಿಡೀ ಉದ್ಯೋಗ ಒದಗಿಸುತ್ತಾ, ಅವರ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗಷ್ಟೇ ಉದ್ಯೋಗ ನೀಡುವ ‘ವಿಬಿ ಗ್ರಾಮ್ ಜಿ’ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದು ಮಹಾತ್ಮ ಗಾಂಧಿಯವರ ಚಿಂತನೆ ಮತ್ತು ಅವರ ಗ್ರಾಮ ಸ್ವರಾಜ್ಯದ ಆಶಯದ ಮೇಲಿನ ಗದಾಪ್ರಹಾರ. ಕೇಂದ್ರ ಸರ್ಕಾರವು ಈ ಜನವಿರೋಧಿ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಮರು ಜಾರಿ ಮಾಡುವ ವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದರು.

ಈ ಸಂದರ್ಭದಲ್ಲಿ  ಡಿಸಿಎಂ  ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, , ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ , ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ ಸಿ ಚಂದ್ರಶೇಖರ್,    ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು..

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular