ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಖಾಸಗಿ ಸುದ್ದಿವಾಹಿನಿ ನಡೆಸಿದ ವಿಶೇಷ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಿ ನಾವು ಗೆಲ್ಲುತ್ತೇವೆ, ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್ ಬಿಜೆಪಿ ಪಕ್ಷಕ್ಕೆ ಅನಾಥ ಪ್ರಜ್ಞೆ ಕಾಡುತ್ತಿದೆ. ಈ ಬಾರಿ ಈ ಎರಡೂ ಪಕ್ಷವನ್ನು ಸೋಲಿಸುತ್ತೇವೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ, ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಡೀ ದೇಶದಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುತ್ತೇವೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಜನ ನಮಗೆ ಅಧಿಕಾರ ನೀಡಿದ್ದಾರೆ. ಸಮಾಜದಲ್ಲಿ ಶಾಂತಿ ವ್ಯವಸ್ಥೆಯನ್ನು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read