HomeKarnatakaಹವಾಮಾನ ಬದಲಾವಣೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಹವಾಮಾನ ಬದಲಾವಣೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರ್ನಬ್ ಚಂಡಮಾರುತದ ಬಳಿಕ ಮತ್ತೊಂದು ಚಂಡಮಾರುತದ ಎಚ್ಚರಿಕೆ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಚಳಿ ವಾತಾವರಣ ಆರಂಭವಾಗಿದೆ. ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಭಾಅರಿ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.

ರಾಜ್ಯಾದ್ಯಂತ ನವೆಂಬರ್ 5ರವರೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆಯೂ ನೀಡಲಾಗಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಮಳೆ ಅಥವಾ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಳ್ಳಾರಿ, ವಿಜಯನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ನವೆಂಬರ್ 5ರವರೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ರಾಜ್ಯದ ಅಲ್ಲಲ್ಲಿ ಗುಡುಗು-ಮಿಂಚು ಸಂಭವಿಸುವ ಸಾಧ್ಯತೆಯೂ ಇದೆ. ಹೀಗಾಗಿ ಸಾರ್ವಜನಿಕರು ಮಳೆಯ ಸಮಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular