HomeKarnatakaಪರಿಶಿಷ್ಟ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪದವಿ ಪೂರ್ವ, ಪದವಿ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶ

ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪದವಿ ಪೂರ್ವ, ಪದವಿ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶ

ಬೆಂಗಳೂರು: ಎಲ್ಲ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ, ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗುವುದು.

ಎಲ್ಲಾ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಯೋಜನೆ ಜಾರಿಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ. ಒಳಗಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಎಲ್ಲ ಅರ್ಹ ಅರ್ಜಿದಾರರಿಗೆ ಫ್ರೀಷಿಪ್ ಕಾರ್ಡ್ ಮಂಜೂರು ಮಾಡಲಾಗುವುದು.

ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗಿರುವ ಪರಿಶಿಷ್ಟ ಜಾತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಎಲ್ಲ ಮೆಟ್ರಿಕ್ ನಂತರದ ಕೋರ್ಸುಗಳಿಗೆ ಉಚಿತ ಪ್ರವೇಶ ಇರುತ್ತದೆ. ಯಾವುದೇ ಶಿಕ್ಷಣ ಸಂಸ್ಥೆ ಪರಿಶಿಷ್ಟ ಜಾತಿ ವಿದ್ಯಾರ್ಥಿಯಿಂದ ಮರುಪಾವತಿ ಮಾಡಲಾಗುವ ಶುಲ್ಕಗಳನ್ನು ಹೊರತುಪಡಿಸಿ ಇತರೆ ಕಡ್ಡಾಯ ಶುಲ್ಕಗಳನ್ನು ಆರಂಭದಲ್ಲಿಯೇ ಪಾವತಿಸುವಂತೆ ಒತ್ತಾಯ ಮಾಡುವಂತಿಲ್ಲ.

https://ssp.postmatric.karnataka.gov.in ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸುವುದು. ಸಹಾಯವಾಣಿ ಸಂಖ್ಯೆ 9482300400 ಸಂಪರ್ಕಿಸಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular