HomeCrimeBIG NEWS: ವೃದ್ಧೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಮದುವೆ ದಿಬ್ಬಣದ ಬಸ್

BIG NEWS: ವೃದ್ಧೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಮದುವೆ ದಿಬ್ಬಣದ ಬಸ್

ಬೆಂಗಳೂರು: ಮದುವೆ ದಿಬ್ಬಣದ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯದ ಬಳಿ ಸಂಭವಿಸಿದೆ.

ಮದುವೆ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದಾಗ ಬಸ್, ಚಾಲಕನ ನಿಯಂತ್ರಣ ತಪ್ಪಿ ವೃದ್ಧೆಗೆ ಡಿಕ್ಕಿ ಹೊಡೆದಿದೆ. ತಪ್ಪಿಸಿಕೊಳ್ಳಲೆಂದು ಚಾಲಕ ಬಸ್ ನ್ನು ಇನ್ನಷ್ಟು ವೇಗವಾಗಿ ಚಲಾಯಿಸಿದ್ದು, ವಿದ್ಯುತ್ ಕಂಬಕ್ಕೆ ಗುದ್ದಿದ್ದು, ಗುದ್ದಿದ ರಭಸಕ್ಕೆ ಬಸ್ ಪಲ್ಟಿಯಾಗಿ ಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ನಲ್ಲಿದ್ದ ಹನುಮಕ್ಕ (65), ಲಕ್ಷ್ಮಿದೇವಮ್ಮ (55) ಹನುಮಯ್ಯ (71) ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular