‘ನಾಚಿಕೆಗೆಟ್ಟ ವಿಶ್ವಗುರುವಿನ ನವ ಭಾರತಕ್ಕೆ ಸ್ವಾಗತ’ : ನಟ ಕಿಶೋರ್ ವಾಗ್ಧಾಳಿ

ಬೆಂಗಳೂರು : ನಾಚಿಕೆಗೆಟ್ಟ ವಿಶ್ವಗುರುವಿನ ನವ ಭಾರತಕ್ಕೆ ಸ್ವಾಗತ. ತಾನು ಮಾಡುತ್ತಿರುವ ಕುಕೃತ್ಯಗಳು ಜಗತ್ತಿಗೆ ಕಾಣುತ್ತಿರುವುದನ್ನು ತಿಳಿದೂ ಮುಂದುವರೆಸುವುದು ಭಂಡತನ, ನಾಚಿಕೆಗೇಡಿತನದ ಪರಾಕಾಷ್ಟೆ ಎಂದು ನಟ ಕಿಶೋರ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಶ್ವದ ಅತಿ ದೊಡ್ಡ ಸ್ಕ್ಯಾಮ್ ಗಾರ ಎಂದು ಆರೋಪ ಹೊತ್ತ, ನೀತಿ ಆಯೋಗದ ವರದಿಯ ಪ್ರಕಾರ ಯೋಗ್ಯತೆಯೇ ಇಲ್ಲದೇ ಇದ್ದರೂ ಬರೀ ವಿಶ್ವಗುರುವಿಗೆ ತನ್ನ ಏರೋಪ್ಲೇನು ಹತ್ತಿಸಿ ದೇಶದ ಬಹುಪಾಲು ಆಸ್ತಿಯನ್ನು ತನ್ನದಾಗಿಸಿಕೊಂಡ ಅದಾನಿ ವಿರುದ್ಧ ಹಿಂಡನ್ಬರ್ಗ್ ಆರೋಪ ಮತ್ತು ಅದರ ಹಲವು ಸಾಕ್ಷಿಗಳು ಹೊರ ಬಂದು ವರ್ಷವೇ ಕಳೆದರೂ ಕಮಕ್ ಕಿಮಕ್ಕನ್ನದ, ರೈತರನ್ನು ಆತಂಕವಾದಿಗಳೆಂದು ಕರೆದು ಅವರ ಮೇಲೆ ಜೀಪು ಹತ್ತಿಸಲು ತನ್ನ ಮಗನಿಗೆ ಕುಮ್ಮಕ್ಕು ಕೊಟ್ಟ ಗೃಹರಾಜ್ಯ ಸಚಿವ ಟೇನಿ ಬಗ್ಗೆ 2 ವರ್ಷವಾದರೂ ಮಾತಾಡದೇ ಕೈಕಟ್ಟಿ ಕೂತ,ವಿಶ್ವ ಪ್ರಸಿದ್ಧ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಬ್ರಿಜ್ ಭೂಷಣನ ಕೂದಲೂ ಅಲ್ಲಾಡಿಸಲಾಗದ, ನಾಚಿಕೆಯೇ ಇಲ್ಲದ ಸರ್ಕಾರ.ಮೋದಾನಿಯ ಜೋಡಿಯ ಬಣ್ಣ ಬಯಲು ಮಾಡಿದ್ದಕ್ಕೆ, ಆಧಾರವೇ ಇಲ್ಲದ ಆರೋಪದ ನೆಪದಲ್ಲಿ ಬಂಗಾಳದ ದಿಟ್ಟ ಮಹಿಳಾ ಸಂಸದೆ ಮಹುವಾ ಮೊಯಿತ್ರಾರನ್ನು ನಂಬಲಸಾಧ್ಯ ವೇಗದಲ್ಲಿ ಉಚ್ಛಾಟನೆ ಮಾಡಿಬಿಡುತ್ತದೆ ಎಂದು ಕಿಡಿಕಾರಿದ್ದಾರೆ.

ಲಾಗಿನ್ ಐಡಿ ಪಾಸ್ವರ್ಡ್ ಸ್ನೇಹಿತನಿಗೆ ಕೊಟ್ಟದ್ದಕ್ಕೆ ಸಂಸತ್ತಿನಿಂದ ಉಚ್ಛಾಟನೆಯಾಗಬಹುದಾದರೆ…. ದೇಶದ ಆಸ್ತಿಗಳನ್ನೆಲ್ಲಾ ಗೆಳೆಯನಿಗೆ ಕೊಟ್ಟ ವಿಶ್ವಗುರುವನ್ನೇನು ಮಾಡಬೇಕು?ನೋಡಿ ಮೊಯಿತ್ರಾಜೀ ಕಲಿಯಿರಿ ನಮ್ಮ ವಿಶ್ವಗುರುವಿನಿಂದ … ಉಚ್ಛಾಟನೆಯಾಗದೆ ಗೆಳೆಯರಿಗೆ ಲಾಭ ಮಾಡಿಕೊಡುವುದು ಮತ್ತು ಗೆಳೆಯರಿಂದ ಲಾಭ ಪಡೆಯುವುದು ಹೇಗೆ ಎಂದು..? ನಟ ಕಿಶೋರ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read