HomeLatest NewsBIG NEWE : ಪಶ್ಚಿಮ ಏಷ್ಯಾ ಸಂಘರ್ಷ ; ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಇಂದು...

BIG NEWE : ಪಶ್ಚಿಮ ಏಷ್ಯಾ ಸಂಘರ್ಷ ; ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಇಂದು ಪ್ರಧಾನಿ ಮೋದಿ ಮಹತ್ವದ ಸಭೆ.!

ನವದೆಹಲಿ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ರಾಜ್ಯಗಳ ಸಿದ್ಧತೆ ಮತ್ತು ಯೋಜನೆಗಳನ್ನು ಪರಾಮರ್ಶಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 27) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೌದು. ಪಶ್ಚಿಮ ಏಷ್ಯಾ ಸಂಘರ್ಷದ ತೀವ್ರತೆಯ ಹಿನ್ನೆಲೆಯಲ್ಲಿ ದೇಶದ ಆಂತರಿಕ ಸಿದ್ಧತೆ ಹಾಗೂ ಭದ್ರತೆಯನ್ನು ಪರಾಮರ್ಶಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 27) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.ಆದರೆ, ಚುನಾವಣೆ ನಡೆಯಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸುವುದಿಲ್ಲ.

ಫೆಬ್ರವರಿ 28 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯೊಂದಿಗೆ ಪ್ರಾರಂಭವಾದ ಈ ಸಂಘರ್ಷದ ಕುರಿತು ಪ್ರಧಾನಿಯವರು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತಿರುವುದು ಇದೇ ಮೊದಲು. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ತನ್ನ ನೆರೆಯ ಕೊಲ್ಲಿ ರಾಷ್ಟ್ರಗಳು ಮತ್ತು ಇಸ್ರೇಲ್ ಮೇಲೆ ದಾಳಿ ನಡೆಸುವ ಮೂಲಕ ತಿರುಗೇಟು ನೀಡಿದೆ. ಮಾದರಿ ನೀತಿ ಸಂಹಿತೆ (MCC) ಜಾರಿಯಲ್ಲಿರುವುದರಿಂದ ಚುನಾವಣೆ ನಡೆಯಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸುತ್ತಿಲ್ಲ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಕ್ಯಾಬಿನೆಟ್ ಸಚಿವಾಲಯವು ಪ್ರತ್ಯೇಕ ಸಭೆ ನಡೆಸಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular