HomeIndiaBIG NEWS: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವು ಹಿನ್ನೆಲೆ: ಸರ್ಕಾರ ರಚನೆಗೆ ಕೇಸರಿ ಪಾಳಯ...

BIG NEWS: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವು ಹಿನ್ನೆಲೆ: ಸರ್ಕಾರ ರಚನೆಗೆ ಕೇಸರಿ ಪಾಳಯ ಕಸರತ್ತು: ಸಿಎಂ ರೇಸ್ ನಲ್ಲಿ ಹಲವು ನಾಯಕರ ಹೆಸರು

ಕೋಲ್ಕತ್ತಾ: ಪಶ್ಚಿಮ ಬಂಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, 15 ವರ್ಷಗಳ ಕಾಲ ಬಂಗಾಳವನ್ನು ಆಳಿದ್ದ ದೀದಿ ಮಮತಾ ಬ್ಯಾನರ್ಜಿ ಅವರ ಏಕಚಕ್ರಾಧಿಪತ್ಯ ಅಂತ್ಯವಾಗಲಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 206 ಸ್ಥಾನಗಳನ್ನು ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದ್ದು, ಟಿಎಂಸಿ ಕೇವಲ 81 ಸ್ಥಾನಗಳನ್ನು ಪಡೆದಿದೆ. ಭಾರಿ ಬಹುಮತದೊಂದಿಗೆ ಬಂಗಾಳದಲ್ಲಿ ಕೇಸರಿ ಬಾವುಟ ಹಾರಿಸಿರುವ ಬಿಜೆಪಿ ಪಶ್ಚಿಮ ಬಂಗಾಳದ ಇತಿಹಾಸದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬರಲಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವ್ನ ಹಿನ್ನೆಲೆಯಲ್ಲಿ ಸರ್ಕಾಅರ ರಚಿಸಲು ಕಸರತ್ತು ನಡೆಸಿದೆ. ಬಂಗಾಳದಲ್ಲಿ ಬಿಜೆಪಿಯ ಮುಖ್ಯಮಂತ್ರಿ ಯಾರಾಗಲಿದ್ದಾರೆ? ಎಂಬ ಕುತೂಹಲ ಮೂಡಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಖ್ಯಮಂತ್ರಿ ರೇಸ್ ನಲ್ಲಿ ಹಲವು ನಾಯಕರ ಹೆಸರು ಕೇಳಿಬರುತ್ತಿದೆ. ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿರುವ ಬಿಜೆಪಿಯ ಮೊದಲ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲವೂ ಮೂಡಿದೆ. ಬಿಜೆಪಿ ತನ್ನ ಪ್ರಚಾರದಲ್ಲಿ ಮಹಿಳಾ ಭದ್ರತೆಯನ್ನು ಮುಂಚೂಣಿಯಲ್ಲಿಟ್ಟುಕೊಂಡಿರುವುದರಿಂದ ಕೇಸರಿ ಪಕ್ಷವು ಮಹಿಳಾ ಮುಖ್ಯಮಂತ್ರಿಯನ್ನು ನೇಮಿಸಬಹುದು ಎಂಬ ಮಾತು ಕೂಡ ಕೇಳಿಬರುತ್ತಿದೆ. ಮಹಿಳಾ ಮೀಸಲಾತಿ ಕಾಯ್ದೆಯ ಗೊಂದಲದ ನಂತರ ಬಿಜೆಪಿ ತನ್ನ ಮಹಿಳಾ ಪರ ಇಮೇಜ್ ಅನ್ನು ಉಳಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದರ ಜೊತೆಗೆ ಬಂಗಾಳದ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ರಾಜ್ಯಾಧ್ಯಕ್ಷರ ಹೆಸರುಗಳು ಕೂಡ ಸಿಎಂ ರೇಸ್​​ನಲ್ಲಿ ಮುಂಚೂಣಿಯಲ್ಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಗಾಳದ ಸಿಎಂ ರೇಸ್ ನಲ್ಲಿರುವ ನಾಯಕರು:

ಸುವೆಂಧು ಅಧಿಕಾರಿ ಅವರ ಹೆಸರು ಸಿಎಂ ರೇಸ್ ನಲ್ಲಿ ಕೇಳಿಬರುತ್ತಿದೆ. ಟಿಎಂಸಿಯ ಮಾಜಿ ನಾಯಕ ಮತ್ತು ಮಮತಾ ಬ್ಯಾನರ್ಜಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸುವೇಂದು ಅಧಿಕಾರಿ ಟಿಎಂಸಿ ತಿರೆದು ಬಿಜೆಪಿ ಸೇರಿ ರಾಜ್ಯಾಧ್ಯಕ್ಷರಾಗಿದ್ದರು. 2021ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಅವರು ಟಿಎಂಸಿಯಿಂದ ಹೊರಬಂದು ಬಿಜೆಪಿ ಸೇರಿದರು. ಅವರನ್ನು ಸಿಎಂ ಸ್ಥಾನದ ಪ್ರಬಲ ಸ್ಪರ್ಧಿ ಎಂದು ಹೇಳಲಾಗುತ್ತಿದೆ. ಬಂಗಾಳದಲ್ಲಿ ಬಿಜೆಪಿಯ ಪ್ರಮುಖ ನಾಯಕನಾಗಿರುವ ಸುವೇಂದು ಅಧಿಕಾರಿ, 2021ರ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಯನ್ನು ಸೋಲಿಸುವ ಮೂಲಕ ಗಮನ ಸೆಳೆದಿದ್ದರು.

ಸಮಿಕ್ ಭಟ್ಟಾಚಾರ್ಯ- ಹೊಸದಾಗಿ ನೇಮಕಗೊಂಡ ಬಂಗಾಳದ ಬಿಜೆಪಿ ಮುಖ್ಯಸ್ಥರಾದ ಸಮಿಕ್ ಭಟ್ಟಾಚಾರ್ಯ ಆರ್‌ಎಸ್‌ಎಸ್‌ ಹಿನ್ನೆಲೆಯಿಂದ ಬಂದವರು. ತೆರೆಮರೆಯಲ್ಲಿ ಕೆಲಸ ಮಾಡಲು ಹೆಸರುವಾಸಿಯಾದ ಭಟ್ಟಾಚಾರ್ಯ ಅವರು ಬಿಜೆಪಿಯ ವ್ಯಾಪ್ತಿಯನ್ನು ವಿಸ್ತರಿಸುವಲ್ಲಿ ಪ್ರಮುಖರಾಗಿದದರೆ.

ಅಗ್ನಿಮಿತ್ರ ಪಾಲ್- ಫ್ಯಾಷನ್ ಡಿಸೈನರ್ ಆಗಿರುವ ಅಗ್ನಿಮಿತ್ರ ಪಾಲ್, ಬಂಗಾಳದಲ್ಲಿ ಬಿಜೆಪಿಯ ಪ್ರಮುಖ ಮಹಿಳಾ ನಾಯಕಿಯರಲ್ಲಿ ಒಬ್ಬರು. ಬಿಜೆಪಿ ಮಹಿಳಾ ಮೋರ್ಚಾದ ಬಂಗಾಳ ಘಟಕದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸಿದ್ದ ಇವರು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗುವ ಮೂಲಕ ಪ್ರಮುಖ ಹುದ್ದೆಯಲ್ಲಿದ್ದಾರೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಿಂದ ಪದವೀಧರೆಯಾಗಿರುವ ಅಗ್ನಿಮಿತ್ರ ಪಾಲ್ ಹೆಸರು ಸಂಭಾವ್ಯ ಸಿಎಂ ಪಟ್ಟಿಯಲ್ಲಿದೆ

ರೂಪಾ ಗಂಗೂಲಿ- ಬಿಆರ್ ಚೋಪ್ರಾ ಅವರ ಮಹಾಭಾರತದಲ್ಲಿ ದ್ರೌಪದಿ ಪಾತ್ರದ ಮೂಲಕ ಪ್ರಸಿದ್ಧಿ ಪಡೆದಿದ್ದ ರೂಪಾ ಗಂಗೂಲಿ, ಬಿಜೆಪಿಯ ಮತ್ತೊಬ್ಬ ಜನಪ್ರಿಯ ಮಹಿಳಾ ನಾಯಕಿ. ರಾಜ್ಯಸಭಾ ಸಂಸದೆಯೂ ಆಗಿದ್ದಾರೆ. ಬಂಗಾಳ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಎರಡು ವರ್ಷಗಳ ಅವಧಿಯಿಂದಾಗಿ ಜನಸಾಮಾನ್ಯರ ಸಂಪರ್ಕವನ್ನು ಹೊಂದಿದ್ದಾರೆ. ಅವರ ಹೆಸರು ಕೂಡ ಸಿಎಂ ರೇಸ್ ನಲ್ಲಿದೆ.

ದಿಲೀಪ್ ಘೋಷ್- ಆಕ್ರಮಣಕಾರಿ ರಾಜಕೀಯ ಶೈಲಿ ಮತ್ತು ಜನಸಾಮಾನ್ಯರ ಸಂಪರ್ಕಕ್ಕೆ ಹೆಸರುವಾಸಿಯಾದ ಮಾಜಿ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಪಶ್ಚಿಮ ಬಂಗಾಳದಲ್ಲಿ ಪಕ್ಷದ ಅಸ್ತಿತ್ವವನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜ್ಯ ಬಿಜೆಪಿ ಮುಖ್ಯಸ್ಥರಾಗಿಲ್ಲದಿದ್ದರೂ ಇವರು ಬಂಗಾಳದ ರಾಜಕೀಯದಲ್ಲಿ ಪ್ರಭಾವಿ ವ್ಯಕ್ತಿಯಾಗಿ ಉಳಿದಿದ್ದಾರೆ. ಆರ್​ಎಸ್​ಎಸ್​ ಹಿನ್ನೆಲೆಯ ದಿಲೀಪ್ ಘೋಷ್ 2014ರಲ್ಲಿ ಬಂಗಾಳ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಸೇರಿದರು.

ಶಂಕರ್ ಘೋಷ್- ಸಿಲಿಗುರಿಯ ಬಿಜೆಪಿ ಶಾಸಕ ಶಂಕರ್ ಘೋಷ್ ಅವರು ಉತ್ತರ ಬಂಗಾಳದ ಪ್ರಮುಖ ಪ್ರಾದೇಶಿಕ ನಾಯಕ. ಅವರ ಪ್ರಭಾವ ರಾಜ್ಯವ್ಯಾಪಿಗಿಂತ ಹೆಚ್ಚು ಪ್ರಾದೇಶಿಕವಾಗಿದೆ. ಅವರ ಹೆಸರು ಕೂಡ ಸಿಎಂ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಉತ್ತರ ಬಂಗಾಳದ ನಾಯಕರಾದ ಇವರು ಸ್ಥಳೀಯ ಮಟ್ಟದಲ್ಲಿ ಸಂಘಟನಾ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇವರ ಜೊತೆಗೆ ಬಂಗಾಳ ಬಿಜೆಪಿಯ ಸ್ವಪನ್ ದಾಸ್ ಗುಪ್ತ, ಉತ್ಪಲ್ ಬ್ರಹ್ಮೋಚಾರೋ ಸೇರಿದಂತೆ ಹಲವು ನಾಯಕರ ಹೆಸರುಗಳು ಕೇಳಿಬರುತ್ತಿವೆ. ಪಶ್ಚಿಮ ಬಂಗಾಳದ ಬಿಜೆಪಿಯ ಮೊದಲ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಕಾದುನೊಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular