HomeIndiaಪಶ್ವಿಮ ಬಂಗಾಳ ವಿಧಾನಸಭೆ ಚುನಾವಣೆ 2026: ಮಹತ್ವದ ಘೋಷಣೆ ಮಾಡಿದ ಕಾಂಗ್ರೆಸ್

ಪಶ್ವಿಮ ಬಂಗಾಳ ವಿಧಾನಸಭೆ ಚುನಾವಣೆ 2026: ಮಹತ್ವದ ಘೋಷಣೆ ಮಾಡಿದ ಕಾಂಗ್ರೆಸ್

ಈ ವರ್ಷ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಪಶ್ಚಿಮ ಬಂಗಾಳ ಸಹ ಒಂದು. ಸದ್ಯ ರಾಜ್ಯದ ಆಡಳಿತ ಪಕ್ಷ ಟಿಎಂಸಿ. ರಾಜ್ಯದ ವಿಧಾನಸಭೆ ಬಲ 294. ರಾಜ್ಯದಲ್ಲಿ ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 148.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2026ರ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಎಲ್ಲಾ 294 ಸೀಟುಗಳಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಈ ಮೂಲಕ ‘ಇಂಡಿಯಾ’ ಮೈತ್ರಿಕೂಟ ಪಶ್ಚಿಮ ಬಂಗಾಳದಲ್ಲಿ ಒಟ್ಟಾಗಿ ಇರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹತ್ವದ ಸಭೆ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಎದುರಿಸಲಿದೆ. ಟಿಎಂಸಿ ಅಥವ ಸಿಪಿಐ (ಎಂ) ನೇತೃತ್ವದ ಎಡಪಕ್ಷಗಳ ಜೊತೆ ಯಾವುದೇ ಸೀಟು ಹಂಚಿಕೆ ಇಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸುವಂಕರ್ ಸರ್ಕಾರ್, ಅಧೀರ್ ರಂಜನ್ ಚೌಧರಿ, ಪಶ್ಚಿಮ ಬಂಗಾಳ ರಾಜ್ಯದ ಕಾಂಗ್ರೆಸ್ ಸಂಸದರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯ ಬಳಿಕ ಪಶ್ಚಿಮ ಬಂಗಾಳ ಕಾಂಗ್ರೆಸ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಈ ಕುರಿತು ಘೋಷಣೆ ಮಾಡಿದರು. “ಪಶ್ಚಿಮ ಬಂಗಾಳದಲ್ಲಿ ಈ ಹಿಂದಿನ ಮೈತ್ರಿ ಅಥವಾ ಸೀಟು ಹಂಚಿಕೆ ಒಪ್ಪಂದಗಳ ಅನುಭವಗಳು ರಾಜ್ಯದ ತಳಮಟ್ಟದ ಪಕ್ಷದ ಕಾರ್ಯಕರ್ತರನ್ನು ಬಹಳ ಮಟ್ಟಿಗೆ ದುರ್ಬಲಗೊಳಿಸಿವೆ” ಎಂದರು.

“ರಾಜ್ಯ ಕಾಂಗ್ರೆಸ್ ನಾಯಕರು ಸೇರಿದಂತೆ ಪ್ರತಿಯೊಬ್ಬರೊಂದಿಗೆ ಚರ್ಚಿಸಿದ ನಂತರ, ಪಶ್ಚಿಮ ಬಂಗಾಳದ ಎಲ್ಲಾ 294 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ನಿರ್ಧರಿಸಲಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಸಿದ್ಧತೆಗಳು ಪ್ರಾರಂಭವಾಗಲಿವೆ” ಎಂದು ಹೇಳಿದರು.

ಆದರೆ ಅಧೀರ್ ರಂಜನ್ ಚೌಧರಿ ಅವರು, ಸಿಪಿಐ(ಎಂ) ನೇತೃತ್ವದ ಎಡ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕರಾಗಿದ್ದರು. ಸಭೆಯ ಬಳಿಕ ಅವರು ಮಾತನಾಡಿ, “ಏಕಾಂಗಿಯಾಗಿ ಸ್ಪರ್ಧಿಸುವುದು ಪಕ್ಷದ ಹೈಕಮಾಂಡ್ ನಿರ್ಧಾರ. ಪಕ್ಷದ ಹೈಕಮಾಂಡ್ ನಿರ್ಧರಿಸಿದಂತೆ ನಾವು ಈ ಬಾರಿ ಸ್ವತಂತ್ರವಾಗಿ ಸ್ಪರ್ಧಿಸಲಿದ್ದೇವೆ” ಎಂದು ತಿಳಿಸಿದರು.

ರಾಜಕೀಯ ವಿಶ್ಲೇಷಕರ ಪ್ರಕಾರ 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದ ಕಗ್ಗಂಟಾಗುವ ನಿರೀಕ್ಷೆ ಇತ್ತು. ಆದ್ದರಿಂದ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಘೋಷಣೆ ಮಾಡಲಾಗಿದೆ.

2016 ರಿಂದ ಎಡರಂಗ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಒಪ್ಪಂದದ ಇಬ್ಬರು ಪ್ರಮುಖ ರೂವಾರಿಗಳು ಸಿಪಿಐ(ಎಂ) ನ ಮಾಜಿ ಪ್ರಧಾನ ಕಾರ್ಯದರ್ಶಿ ದಿವಂಗತ ಸೀತಾರಾಂ ಯೆಚೂರಿ ಮತ್ತು ಪಶ್ಚಿಮ ಬಂಗಾಳದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ಐದು ಬಾರಿ ಲೋಕಸಭಾ ಸದಸ್ಯರಾಗಿದ್ದ ಅಧೀರ್ ರಂಜನ್ ಚೌಧರಿ.

ಈಗ ಯೆಚೂರಿಯವರ ನಿಧನದ ನಂತರ ಕಾಂಗ್ರೆಸ್ ಜೊತೆಗಿನ ಹೊಂದಾಣಿಕೆಗಾಗಿ ಪಕ್ಷದ ಕೇಂದ್ರ ನಾಯಕತ್ವವನ್ನು ಮನವೊಲಿಸಲು ಒಬ್ಬ ರಾಷ್ಟ್ರೀಯ ನಾಯಕ ಸಿಪಿಐ(ಎಂ) ಕೇಂದ್ರ ಸಮಿತಿಯಲ್ಲಿ ಇಲ್ಲದಂತಾಗಿದೆ. ಆದ್ದರಿಂದ ಕಾಂಗ್ರೆಸ್ ಯಾವುದೇ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular