West Bengal HORROR | ಟಿಎಂಸಿ ಸೇರಿದ್ದಕ್ಕೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ; ಬಿಜೆಪಿ ಮುಖಂಡರು ಅರೆಸ್ಟ್

ಈ ಮೊದಲು ಬಿಜೆಪಿಯಲ್ಲಿದ್ದ ಮಹಿಳೆ ಮತ್ತು ಆಕೆಯ ಪತಿ ಕಳೆದ ಚುನಾವಣೆ ಸಂದರ್ಭದಲ್ಲಿ ತೃಣ ಮೂಲ ಕಾಂಗ್ರೆಸ್ ಪಕ್ಷ ಸೇರಿದ್ದು, ಹೀಗಾಗಿ ಬಿಜೆಪಿ ಸ್ಥಳೀಯ ಮುಖಂಡರು ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳೀಯ ಬಿಜೆಪಿ ಮುಖಂಡರನ್ನು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ನಂದಿಗ್ರಾಮ ಜಿಲ್ಲೆ ಗೋಕುಲನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಚನ್ ತಾಲ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, 30 ರಿಂದ 40 ಮಂದಿ ಇದ್ದ ಗುಂಪು ಮಹಿಳೆ ತನ್ನ ಮಗಳ ಜೊತೆ ಮಲಗಿದ್ದಾಗ ಮನೆಗೆ ನುಗ್ಗಿದೆ. ಬಳಿಕ ಆಕೆಯನ್ನು ಹಿಡಿದು ಹೊರ ತಂದು ವಿವಸ್ತ್ರಗೊಳಿಸಿ ಹಲ್ಲೆ ಮಾಡುತ್ತಾ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ ಎನ್ನಲಾಗಿದೆ.

ಅಷ್ಟರಲ್ಲಾಗಲೇ ಕೆಲವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಅವರು ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದರು. ಇದೀಗ ಮಹಿಳೆ ಪೊಲೀಸರಿಗೆ ದೂರು ಸಲ್ಲಿಸಿದ್ದು, ನಾನು ನನ್ನ ಪತಿ, ಬಿಜೆಪಿ ಬಿಟ್ಟು ಟಿಎಂಸಿ ಸೇರಿದ ಕಾರಣಕ್ಕೆ ಈ ಕೃತ್ಯ ನಡೆಸಲಾಗಿದೆ. ಈ ಮೊದಲು ಸಹ ನಮ್ಮಗಳ ಮೇಲೆ ಹಲ್ಲೆ ನಡೆದಿದ್ದು, ಪೊಲೀಸರಿಗೆ ದೂರು ನೀಡಿದ್ದೆವು. ಅದನ್ನು ಹಿಂಪಡೆಯುವಂತೆಯೂ ಸಹ ನನಗೆ ಒತ್ತಡ ಹೇರಲಾಗಿತ್ತು ಎಂದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳೀಯ ಬಿಜೆಪಿ ಬೂತ್ ಅಧ್ಯಕ್ಷ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read