HomeLive NewsBREAKING: ಪಶ್ಚಿಮ ಬಂಗಾಳ: ಮತದಾನದ ವೇಳೆ ಬಾಂಬ್ ದಾಳಿ: 24 ಗಂಟೆಯೊಳಗೆ ಎರಡನೇ ಘಟನೆ

BREAKING: ಪಶ್ಚಿಮ ಬಂಗಾಳ: ಮತದಾನದ ವೇಳೆ ಬಾಂಬ್ ದಾಳಿ: 24 ಗಂಟೆಯೊಳಗೆ ಎರಡನೇ ಘಟನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಈ ವೇಳೆ ದುಷ್ಕರ್ಮಿಗಳು ಬಾಂಬ್ ದಾಳಿ ನಡೆಸಿರುವ ಘಟನೆ ನಡೆದಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಮತದಾನದ ವೇಳೆ ಕೆಲವು ದುಷ್ಕರ್ಮಿಗಳು ಕಚ್ಚಾ ಬಾಂಬ್ ಎಸೆದಿದ್ದಾರೆ. ಬಾಂಬ್ ದಾಳಿಯಿಂದಾಗಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೌಡಾದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ನಿನ್ನೆ ರಾತ್ರಿ ಶಿವನಗರ ಪ್ರಾಥಮಿಕ ಶಾಲೆಯ ಬಳಿ ಕಚ್ಚಾ ಬಾಂಬ್‌ ದಾಳಿ ನಡೆದಿತ್ತು. ಘಟನೆಯಲ್ಲಿ ಓರ್ವ ಮಹಿಳೆ ಗಾಯಗೊಂಡಿದ್ದರು. ಸಮೀಪದಲ್ಲಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಸಾಹಿನಾ ಮುಮ್ತಾಜ್ ಖಾನ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆಯ ನಂತರ, ಮುರ್ಷಿದಾಬಾದ್ ಜಿಲ್ಲೆಯಲ್ಲಿ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದ್ದು, ಮತದಾನ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular