HomeIndiaBREAKING: ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಸುವೆಂದು ಅಧಿಕಾರಿ ಆಯ್ಕೆ: ಅಗ್ನಿಮಿತ್ರ ಪೌಲ್ ಸೇರಿ...

BREAKING: ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಸುವೆಂದು ಅಧಿಕಾರಿ ಆಯ್ಕೆ: ಅಗ್ನಿಮಿತ್ರ ಪೌಲ್ ಸೇರಿ ಇಬ್ಬರಿಗೆ ಡಿಸಿಎಂ ಪಟ್ಟ

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದ್ದು, ಸುವೆಂದು ಅಧಿಕಾರಿ ಬಂಗಾಳ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಕೋಲ್ಕತ್ತಾದ ಬಿಸ್ವಾ ಬೆಂಗಾಳ ಕನ್ವೆನ್ಷನ್ ಸೆಂಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಿತು. ಸುವೇಂದು ಅಧಿಕಾರಿ ಹೆಸರನ್ನು ಒಮ್ಮತದಿಂದ ಘೋಷಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಮತಾ ಬ್ಯಾನರ್ಜಿಯವರನ್ನು ಎರಡು ಬಾರಿ ಸೋಲಿಸಿದ ದಿಗ್ಗಜರಾದ ಸುವೇಂದು ಅಧಿಕಾರಿ ಸದ್ಯ ಬಂಗಾಳ ಬಿಜೆಪಿಯಲ್ಲಿ ಅಗ್ರಗಣ್ಯ ನಾಯಕರಾಗಿರುವ ಹಿನ್ನೆಲೆಯಲ್ಲಿ ಸಹಜವಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಈ ವೇಳೆ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಆಯ್ಕೆಗೆ ಬಿಜೆಪಿ ನಾಯಕರ ಹೆಸರನ್ನು ಸೂಚಿಸಲು ಹೇಳಲಾಗಿತ್ತು. ಆದರೆ ಸುವೆಂದು ಅಧಿಕಾರಿ ಬಿಟ್ಟು ಬೇರೆ ಯಾವ ಹೆಸರನ್ನೂ ಸೂಚಿಸದ ಹಿನ್ನೆಲೆಯಲ್ಲಿ ಅಂತಿಮವಾಗಿ ಸುವೆಂದು ಅಧಿಕಾರಿ ಅವರನ್ನು ಬಂಗಾಳ ಸಿಎಂ ಆಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದರು.

ಇನ್ನು ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಇಬ್ಬರು ಡಿಸಿಎಂಗಳನ್ನು ಆಯ್ಕೆ ಮಾಡಲಾಗಿದೆ.ದಕ್ಷಿಣ ಅಸಾನ್ಸೋಲ್​ನಲ್ಲಿ ಗೆದ್ದಿರುವ ಬಿಜೆಪಿ ಮಹಿಳಾ ನಾಯಕಿ ಅಗ್ನಿಮಿತ್ರಾ ಪೌಲ್ ಹಾಗೂ ಮಾಜಿ ಕೇಂದ್ರ ಸಚಿವ ನಿಸಿತ್ ಪ್ರಾಮಾಣಿಕ್ ಅವರನ್ನು ಡಿಸಿಎಂಗಳಾಗಿ ಆಯ್ಕೆ ಮಾಡಲಾಗಿದೆ. ಮಹಿಳೆ ಹಾಗೂ ಬುಡಕಟ್ಟು ಸಮುದಾಯ ಪರಿಗಣಿಸಿ ಡಿಸಿಎಂ ಸ್ಥಾನಕ್ಕೆ ಪರಿಗಣಿಸಲಾಗಿದೆ ಎನ್ನಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಈ ಹಿಂದೆ ಯಾರೂ ಕೂಡ ಉಪಮುಖ್ಯಮಂತ್ರಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಂಗಾಳದಲ್ಲಿ ಡಿಸಿಎಂ ಆಯ್ಕೆ ಕೂಡ ಮಹತ್ವ ಪಡೆದಿದೆ.

ಪಶ್ಚಿಮ ಬಂಗಾಳದಲ್ಲಿ ನಾಳೆಯಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಪಶ್ಚಿಮ ಬಂಗಾಳದ 294 ಕ್ಷೇತ್ರಗಳ ಪೈಕಿ 293 ಕ್ಷೇತ್ರಗಳಿಗೆ ಚುನಾವಣೆ ಪೂರ್ಣಗೊಂಡು ಫಲಿತಾಂಶ ಪ್ರಕಟವಾಗಿದೆ. ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದೆ. ಏಕಾಂಗಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ಬರೋಬ್ಬರಿ 207 ಸ್ಥಾನಗಳಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಟಿಎಂಸಿ 80 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ 2 ಸ್ಥಾನ ಪಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular