ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಇಂದಿನಿಂದ ಬಂಗಾಳದಲ್ಲಿ ಬಿಜೆಪಿ ಆಡಳಿತ ಆರಂಭವಾಗಲಿದೆ. ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್.ರವಿ ಪ್ರತಿಜ್ಞಾವಿಧಿ ಬೋಧಿಸಿದರು. ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚ್ನಾ ಸ್ವೀಕರಿಸುತ್ತಿದ್ದಂತೆ ಮೈದಾನದ ತುಂಬೆಲ ಬಿಜೆಪಿ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.
ಇದೇ ವೇಳೆ ಸಚಿವರಾಗಿ ದಿಲೀಪ್ ಘೋಷ್, ಅಗ್ನಿ ಮಿತ್ರ ಪಾಲ್, ಅಶೋಕ್ ಕೀರ್ತನಿಯಾ, ಕ್ಷುದಿರಾಮ್ ಟುಡು, ನಿಶಿತ್ ಪ್ರಾಮಾಣಿಕ್ ಪ್ರಮಾಣವಚನ ಸ್ವೀಕರಿಸಿದರು. ಅಗ್ನಿಮಿತ್ರ ಪಾಲ್ ಹಾಗೂ ನಿಶಿತ್ ಪ್ರಮಾಣ್ ಇಬ್ಬರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಬಂಗಾಳ ಡಿಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ
ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ ನಬಿನ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಆಂಧ್ರ ಸಿಎಂ ಚಂದ್ರಬಾಬು ನಾಯ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 206 ಕ್ಷೇತ್ರಗಳಲ್ಲಿ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ ದಾಖಲೆ ಸೃಷ್ಟಿಸಿದೆ. ಟಿಎಂಸಿ 80 ಕ್ಷೇತ್ರಗಳಲ್ಲಿ ಗೆಲು ಸಾಧಿಸಿದೆ. ಈ ಮೂಲಕ ಪಶ್ಚಿಮಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ದೀದಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಏಕಚಕ್ರಾಧಿಪತ್ಯ ಅಂತ್ಯವದಂತಾಗಿದೆ.

