HomeIndiaSHOCKING: ಕಾರಿನ ಇಎಂಐ ವಿಚಾರವಾಗಿ ಜಗಳ: ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆಗೈದ ಪತಿ

SHOCKING: ಕಾರಿನ ಇಎಂಐ ವಿಚಾರವಾಗಿ ಜಗಳ: ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆಗೈದ ಪತಿ

ಕೋಲ್ಕತ್ತಾ: ಕ್ಷುಲ್ಲಕ ಕಾಅರಣಕ್ಕೆ ಪತಿ-ಪತ್ನಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ನಲ್ಲಿ ನಡೆದಿದೆ.

ಜಗಳದ ಬಳಿಕ ಕೋಪದ ಬರದಲ್ಲಿ ಪತಿ ಮಹಾಶಯ ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ. ಪತ್ನಿ ನರ್ಸ್ ಆಗಿದ್ದು, ಕಾರಿನ ಇಎಂಐ ಪಾವತಿಗೆ ಸಂಬಂಧಿಸಿದ ಜಗಳದಲ್ಲಿ ಪತಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ.

ಕೂಚ್ ಬೆಹಾರ್‌ನಲ್ಲಿರುವ ಎಂಜೆಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರಸೂತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಛಂದಾ ರಾಯ್ ಮೃತ ಮಹಿಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಛಂದಾ ಮನೆಯಿಂದ ಕೂಗುತ್ತಾ ಹೊರಗೆ ಓಡಿಹೋಗಿದ್ದಳು, ಬೆಂಕಿ ಹೊತ್ತಿಕೊಂಡಿದ್ದರಿಂದ ಆ ಪ್ರದೇಶದಲ್ಲಿ ಜನರು ಭಯಭೀತರಾದರು. ಬೆಂಕಿ ನಂದಿಸಿ ಆಕೆಯನ್ನು ಎಂಜೆಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆಂದು ವೈದ್ಯರು ಘೋಷಿಸಿದ್ದಾರೆ.

ಛಂದಾ ಅವರು ಕಳೆದ ಮೂರುವರೆ ವರ್ಷಗಳಿಂದ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ತಮ್ಮ ಪತಿ ರಂಜಿತ್ ರಾಯ್ ಜೊತೆ ವಾಸವಾಗಿದ್ದರು. ದಂಪತಿಯ ಪುತ್ರಿ ಡಾರ್ಜಿಲಿಂಗ್‌ನ ಬೋರ್ಡಿಂಗ್ ಶಾಲೆಯಲ್ಲಿ ಓದುತ್ತಿದ್ದಾಳೆ. ಪತಿ ವೃತ್ತಿಯಲ್ಲಿ ಚಾಲಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನ ಸಮಾನ ಮಾಸಿಕ ಕಂತುಗಳ ಪಾವತಿಗೆ ಸಂಬಂಧಿಸಿದಂತೆ ದಂಪತಿ ಆಗಾಗ ಜಗಳವಾಡುತ್ತಿದ್ದರು.

ರಂಜಿತ್ ಜೀವನ ಸಾಗಿಸಲು ವಾಹನವನ್ನು ಖರೀದಿಸಿದ್ದರು. ಸಾಲ ಮರುಪಾವತಿಗೆ ಸಂಬಂಧಿಸಿದ ವಿವಾದಗಳು ದಂಪತಿ ನಡುವೆ ಪದೇ ಪದೇ ನಡೆಯುತ್ತಿತ್ತು. ಮಹಿಳಾ ಪೊಲೀಸ್ ಠಾಣೆಗೂ ತಲುಪಿತ್ತು. ಆದರೆ ಆ ಸಮಯದಲ್ಲಿ ಯಾವುದೇ ಔಪಚಾರಿಕ ದೂರು ದಾಖಲಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈಗಲೂ ಇದೇ ವಿಚಾರವಾಗಿ ಗಲಾಟೆ ನಡೆದಿದ್ದು, ರಂಜಿತ್ ಪತ್ನಿಯನ್ನೇ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ರಂಜಿತ್ ಕೂಡ ಸುಟ್ಟ ಗಾಯಗಳಾಗಿದ್ದು, ಪ್ರಸ್ತುತ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಮೇಲೆ ನಿಗಾ ಇಡಲಾಗಿದ್ದು, ಅವರ ಸ್ಥಿತಿ ಸ್ಥಿರವಾದ ನಂತರ ಹೇಳಿಕೆಯನ್ನು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular