HomeLatest Newsಇಂದು ಎರಡನೇ ಏಕದಿನ ಪಂದ್ಯ: ಭಾರತಕ್ಕೆ ವಿಂಡೀಸ್ ವಿರುದ್ಧ ಸತತ 13ನೇ ಸರಣಿ ಗೆಲುವಿನ ಗುರಿ

ಇಂದು ಎರಡನೇ ಏಕದಿನ ಪಂದ್ಯ: ಭಾರತಕ್ಕೆ ವಿಂಡೀಸ್ ವಿರುದ್ಧ ಸತತ 13ನೇ ಸರಣಿ ಗೆಲುವಿನ ಗುರಿ

ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಜಯಿಸಿದ ಭಾರತ ಇಂದು ಎರಡನೇ ಪಂದ್ಯ ಎದುರು ನೋಡುತ್ತಿದೆ.

ವೆಸ್ಟ್ ಇಂಡೀಸ್ ವಿರುದ್ಧ ಸತತ 12 ಏಕದಿನ ಸರಣಿ ಗೆದ್ದಿರುವ ಭಾರತ ಈ ಸರಣಿಯನ್ನು ಜಯಿಸಿ ಸತತ 13ನೇ ಸರಣಿ ಗೆಲ್ಲುವ ಗುರಿ ಹೊಂದಿದೆ. ಸುಧಾರಿತ ಬ್ಯಾಟಿಂಗ್ ಪ್ರದರ್ಶನದೊಂದಿಗೆ ವಿಶ್ವಕಪ್ ಸಿದ್ಧತೆ ನಿರೀಕ್ಷೆಯಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಲು ಸಜ್ಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೆಸ್ಟ್ ಇಂಡೀಸ್ ತವರಿನಲ್ಲಿ ಸತತ 5 ಸರಣಿ ಸೋತಿದ್ದು, ವಿಶ್ವಕಪ್ ಗೆ ಅರ್ಹತೆ ಸಿಗದೇ ಆಘಾತಕ್ಕೆ ಒಳಗಾಗಿದೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಉತ್ತಮ ಪ್ರದರ್ಶನದೊಂದಿಗೆ ಗೆಲುವಿಗೆ ಭಾರತ ಕಾರ್ಯತಂತ್ರ ರೂಪಿಸಿದೆ.

ಮೊದಲ ODIನಲ್ಲಿ ಆತಿಥೇಯರನ್ನು ಸೋಲಿಸಿದ ನಂತರ, ಬ್ರಿಡ್ಜ್‌ ಟೌನ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಶನಿವಾರ  ನಡೆಯಲಿರುವ ಎರಡನೇ ODI ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸುವ ತವಕದಲ್ಲಿದೆ.

ಪಿಚ್ ಸ್ಪಿನ್ನರ್‌ಗಳಿಗೆ ಸಹಾಯ ಮಾಡುವ ನಿರೀಕ್ಷೆಯಲ್ಲಿ ಭಾರತ ಹೆಚ್ಚುವರಿ ಸ್ಪಿನ್ನರ್ ಆಯ್ಕೆ ಮಾಡಬಹುದು. ಭಾರತದ ಪರ ಆಡುವ 11 ಆಟಗಾರರಲ್ಲಿ ಶಾರ್ದೂಲ್ ಠಾಕೂರ್ ಬದಲಿಗೆ ಅಕ್ಷರ್ ಪಟೇಲ್ ಕಣಕ್ಕಿಳಿಯಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular