BIG NEWS : ರಾಜ್ಯ ಸರ್ಕಾರ ಕೇಂದ್ರದ ಮುಂದಿಟ್ಟಿರುವ ಪ್ರಸ್ತಾವನೆಗಳು ಏನೇನು..? ಹೀಗಿದೆ ಹೈಲೆಟ್ಸ್..!

ನವದೆಹಲಿ : ನೂತನವಾಗಿ ಆಯ್ಕೆಯಾದ ಸಂಸದರು ಹಾಗೂ ಕೇಂದ್ರದ ಸಚಿವರೊಂದಿಗೆ ರಾಜ್ಯ ಸರ್ಕಾರ ಸಭೆ ನಡೆಸಿದ್ದು, ಕೇಂದ್ರ ಸರ್ಕಾರದ ಮುಂದೆ ಹಲವು ಪ್ರಸ್ತಾವನೆಗಳನ್ನು ಇಟ್ಟಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ನವದೆಹಲಿಯಲ್ಲಿ ನಿನ್ನೆ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದಲ್ಲಿ ಅನುಮೋದನೆಗೆ ಬಾಕಿ ಇರುವ ಪ್ರಸ್ತಾವನೆಗಳು ಹಾಗೂ ರಾಜ್ಯದ ಹಿತದೃಷ್ಟಿಯಿಂದ ಆಗಬೇಕಾಗಿರುವ ಕೆಲಸಗಳ ಕುರಿತು ಚರ್ಚಿಸಿದರು.

ಏನದು ಪ್ರಸ್ತಾವನೆ..?

* ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಬಜೆಟ್ನಲ್ಲೇ ಅನುದಾನ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣವನ್ನು ಕೇಂದ್ರದಿಂದ ಬಿಡುಗಡೆ ಮಾಡಿಸಬೇಕು.

* ರಾಯಚೂರಿಗೆ ಏಮ್ಸ್ ನೀಡಲು ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಮನವಿಯನ್ನು ಪುರಸ್ಕರಿಸಬೇಕು. ಇದರಿಂದಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ವೈದ್ಯಕೀಯ ಸೌಲಭ್ಯ ಸಿಗಲಿದೆ.

* 18,172 ಕೋಟಿ ರೂ. ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ ಇದಕ್ಕಾಗಿ ಸಂಘಟಿತರಾಗಿ ಹೋರಾಡಬೇಕು.

* ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರಿಕ ವಿಮಾನಯಾನ ಇಲಾಖೆಯಲ್ಲಿ ಬಾಕಿ ಇದೆ. ಇದರ ಈಡೇರಿಕೆಗೆ ಪ್ರಯತ್ನಿಸಬೇಕು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ
ಇದರ ಬಗ್ಗೆಯೂ ಕೇಂದ್ರದ ಗಮನ ಸೆಳೆಯಬೇಕು.

* ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ.

• ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು.

* ರಾಜ್ಯವು ರೈಲ್ವೆ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೆ ಸೌಲಭ್ಯ ಒದಗಿಸಬೇಕು.

* ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ.

* 15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಬಲವಾಗಿ ವಾದ ಮಂಡಿಸಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read