ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಸೇರಿ ಹಲವರು ಆತಂಕ ವ್ಯಕ್ತಪಡಿಸಿದ್ದರು. ಕೇಂದ್ರ ಸಚಿವರು ಪ್ರತಿಕ್ರಿಯೆ ನೀಡಿ ಇದು ಬಹಳ ಅಪಾಯ ಎಂದಿದ್ದಾರೆ. ಇದೀಗ ಈ ಕುರಿತು ನಟಿ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈ ಘಟನೆಯಿಂದ ನನಗೆ ಬಹಳ ನೋವಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ನಟಿ ರಶ್ಮಿಕಾ ಮಂದಣ್ಣ ಪೋಸ್ಟ್ ಮಾಡಿದ್ದಾರೆ. ತಂತ್ರಜ್ಞಾನವನ್ನು ದುರುಪಯೋಗವು ಅತ್ಯಂತ ಭಯಾನಕವಾಗಿದೆ. ನಾನು ಮಹಿಳೆಯಾಗಿ ಮತ್ತು ನಟಿಯಾಗಿ ನನ್ನನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎನ್ನುವುದು ಅರಿವಿದೆ. ನನ್ನ ಕುಟುಂಬ ಮತ್ತು ಸ್ನೇಹಿತರು ಹಾಗೂ ಹಿತೈಷಿಗಳು ನನ್ನ ಬೆಂಬಲಕ್ಕೆ ನಿಂತಿದ್ದಾರೆ ಎಂದು ನಟಿ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಭಾನುವಾರ, ರಶ್ಮಿಕಾ ಅವರ ವೀಡಿಯೊ ಎಕ್ಸ್ (ಟ್ವಿಟರ್) ನಲ್ಲಿ ವೈರಲ್ ಆಗಿತ್ತು, ಇದನ್ನು ಅಭಿಷೇಕ್ ಕುಮಾರ್ ಎಂಬ ಪತ್ರಕರ್ತ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಇದು ಡೀಪ್ ಫೇಕ್ ವೀಡಿಯೊ ಎಂದು ಬಹಿರಂಗಪಡಿಸಿದ್ದಾರೆ.
https://twitter.com/libsofsnapchat/status/1721346309586866177?ref_src=twsrc%5Etfw%7Ctwcamp%5Etweetembed%7Ctwterm%5E1721346309586866177%7Ctwgr%5E14f122d4d9a341f8d8b9ba9d64331320e9b6a6fc%7Ctwcon%5Es1_&ref_url=https%3A%2F%2Fkannadadunia.com%2Flive-news%2Factress-rashmika-mandanna-fake-video-viral-actor-amitabh-bachchan-sparks%2F