HomeKarnatakaBIG NEWS : ರಾಜ್ಯದ ‘ಬರ ಪರಿಸ್ಥಿತಿ' ಕುರಿತು ಟ್ವೀಟ್ ಮಾಡಿದ ಮಾಜಿ ಸಿಎಂ 'BSY'...

BIG NEWS : ರಾಜ್ಯದ ‘ಬರ ಪರಿಸ್ಥಿತಿ’ ಕುರಿತು ಟ್ವೀಟ್ ಮಾಡಿದ ಮಾಜಿ ಸಿಎಂ ‘BSY’ ಹೇಳಿದ್ದೇನು..?

ಬೆಂಗಳೂರು : ರಾಜ್ಯದ 120ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಬಹುತೇಕ ಅಣೆಕಟ್ಟುಗಳು ಬರಿದಾಗಿದೆ ಎಂದು ರಾಜ್ಯದಲ್ಲಿ ಎದುರಾದ ‘ಬರ ಪರಿಸ್ಥಿತಿ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ರಾಜ್ಯದ 120ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಬಹುತೇಕ ಅಣೆಕಟ್ಟುಗಳು ಬರಿದಾಗಿ ನಮ್ಮ ರೈತ ಸಮುದಾಯ ಒಣ ಬೇಸಾಯವನ್ನೂ ಮಾಡಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಇನ್ನು ಕಾಲಹರಣ ಮಾಡದೆ, ಕೂಡಲೇ ಬರಪೀಡಿತ ಪ್ರದೇಶಗಳನ್ನು ಘೋಷಿಸಿ, ರೈತರಿಗೆ ಪರಿಹಾರ ನೀಡಬೇಕು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಬರಗಾಲ ಘೋಷಿಸುವ ಬಗ್ಗೆ ಸಚಿವ ಚೆಲುವಯರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ಬರಗಾಲ ಎಂದು ಘೋಷಿಸಲು ಮಾರ್ಗಸೂಚಿ ಪಾಲಿಸಬೇಕು. ಬರಪೀಡಿತ ಪ್ರದೇಶಗಳ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇನ್ನೂ ಬಂದಿಲ್ಲ, ಇದಕ್ಕೆ ಮಾರ್ಗಸೂಚಿ ಅಡ್ಡಿಬಂದಿರುವುದರಿಂದ ಘೋಷಣೆ ಮಾಡಲು ಆಗುತ್ತಿಲ್ಲಸಂಪೂರ್ಣ ಮಾಹಿತಿ ತರಿಸಿಕೊಂಡು ಈ ಬಗ್ಗೆ ಘೋಷಣೆ ಮಾಡಲಿದ್ದೇವೆ , 100ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ ಎಂದು ಘೋಷಿಸುತ್ತೇವೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular