BIG NEWS : ವಯನಾಡು ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ ಹೇಳಿದ್ದೇನು..?

ನವದೆಹಲಿ : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಕೇರಳದ  ವಯನಾಡು  ಲೋಕಸಭಾ ಕ್ಷೇತ್ರದಿಂದ   ಇಂದು  ನಾಮಪತ್ರ ಸಲ್ಲಿಸಿದರು.

“ವಯನಾಡ್ ನನ್ನ ಮನೆ, ವಯನಾಡ್ ಜನರು ನನ್ನ ಕುಟುಂಬ. ಅವರಿಂದ ಕಳೆದ ಐದು ವರ್ಷಗಳಲ್ಲಿ ನಾನು ಬಹಳಷ್ಟು ಕಲಿತಿದ್ದೇನೆ ಮತ್ತು ಅಪಾರ ಪ್ರೀತಿ ಮತ್ತು ವಾತ್ಸಲ್ಯವನ್ನು ಪಡೆದಿದ್ದೇನೆ” ಎಂದು ರಾಹುಲ್ ಗಾಂಧಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

“ಈ ಸುಂದರ ಭೂಮಿಯಿಂದ ನಾನು ಮತ್ತೊಮ್ಮೆ 2024 ರ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿರುವುದು ಬಹಳ ಹೆಮ್ಮೆ ಯಾಗುತ್ತಿದೆ ಎಂದು ಅವರು ಹೇಳಿದರು. ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಪಕ್ಷದ ಇತರ ಹಿರಿಯ ನಾಯಕರೊಂದಿಗೆ ವಯನಾಡ್ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ದಾಖಲೆಗಳನ್ನು ಸಲ್ಲಿಸಿದ ನಂತರ, ಗಾಂಧಿ ಸಂವಿಧಾನವನ್ನು ಎತ್ತಿಹಿಡಿಯುವ ಪ್ರತಿಜ್ಞೆಯನ್ನು ಓದಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read