‘ಬಾಂಗ್ಲಾ ಪ್ರಧಾನಿ’ಗೆ ಬಂದ ಗತಿ ರಾಜ್ಯಪಾಲರಿಗೂ ಬರಲಿದೆ : MLC ‘ಐವನ್ ಡಿಸೋಜ’ ವಿವಾದಾತ್ಮಕ ಹೇಳಿಕೆ

ಮಂಗಳೂರು : ಕೇಂದ್ರ ಸರ್ಕಾರ ರಾಜ್ಯಪಾಲರನ್ನು ವಾಪಸ್ ಕರೆಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ, ಬಾಂಗ್ಲಾ ಪ್ರಧಾನಿಗೆ ಬಂದ ಗತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ MLC ‘ಐವನ್ ಡಿಸೋಜ’ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ನಿನ್ನೆ ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ MLC ‘ಐವನ್ ಡಿಸೋಜ’ ಬಾಂಗ್ಲಾ ಪ್ರಧಾನಿಗೆ ಬಂದ ಗತಿ ರಾಜ್ಯಪಾಲರಿಗೂ ಬರಬಹುದು.ಎಂದು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಪಾಲರನ್ನು ವಾಪಸ್ ಕರೆಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ, ಇದು ಆಗದಿದ್ದರೆ ಬಾಂಗ್ಲಾ ಪ್ರಧಾನಿಗೆ ಬಂದ ಗತಿ ರಾಜ್ಯಪಾಲರಿಗೂ ಬರಬಹುದು ಎಂದು ಹೇಳಿದ್ದಾರೆ. ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ಸ್ಥಿತಿ ಬರಬಹುದು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಐವನ್ ಡಿಸೋಜ ವಿರುದ್ದ ಕ್ರಮಕ್ಕೆ ಬಿಜೆಪಿ ನಿಯೋಗ ಮನವಿ ಮಾಡಿದ್ದು, ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read