HomeIndiaಮದ್ರಸಾಗಳಲ್ಲಿ 'ವಂದೇ ಮಾತರಂ' ಹಾಡಿದರೆ ತಪ್ಪೇನಿದೆ...?, ಆಕಾಶವೇನೂ ಕಳಚಿ ಬೀಳಲ್ಲ: ಹೈಕೋರ್ಟ್

ಮದ್ರಸಾಗಳಲ್ಲಿ ‘ವಂದೇ ಮಾತರಂ’ ಹಾಡಿದರೆ ತಪ್ಪೇನಿದೆ…?, ಆಕಾಶವೇನೂ ಕಳಚಿ ಬೀಳಲ್ಲ: ಹೈಕೋರ್ಟ್

ಕೊಲ್ಕತ್ತಾ: ಮದ್ರಸಾಗಳಲ್ಲಿ ವಂದೇ ಮಾತರಂ ಗೀತೆ ಹಾಡುವುದರಲ್ಲಿ ತಪ್ಪೇನಿದೆ..? ಮದ್ರಸಾಗಳಲ್ಲಿ ವಂದೇ ಮಾತರಂ ಗೀತೆ ಹಾಡುವುದರಿಂದ ಆಕಾಶವೇನು ಕಳಚಿ ಬೀಳುವುದಿಲ್ಲ ಎಂದು ಕೊಲ್ಕತ್ತಾ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮದ್ರಸಾಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಪಠಿಸಬೇಕೆಂಬ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆ ನಡೆಸಿದ ಕೊಲ್ಕತ್ತಾ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ತಪಭೃತ ಚಕ್ರವರ್ತಿ ನೇತೃತ್ವದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಬೇರೆ ಸಂಪ್ರದಾಯದ ಪ್ರಾರ್ಥನೆಗಳನ್ನು ಹಾಡುವುದು ವ್ಯಕ್ತಿಯ ಧರ್ಮಕ್ಕೆ ಧಕ್ಕೆ ತರುವುದಿಲ್ಲ. ಸಾವಿರಾರು ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಾರ್ಥನೆ ಕಡ್ಡಾಯಗೊಳಿಸಲಾಗಿದೆ. ಅಲ್ಲಿ ಇತರೆ ಸಮುದಾಯದ ವಿದ್ಯಾರ್ಥಿಗಳು ಕೂಡ ಭಾಗವಹಿಸುತ್ತಾರೆ ಎನ್ನುವ ಮಾತ್ರಕ್ಕೆ ಆಕಾಶವೇನು ಬಿದ್ದು ಹೋಗುವುದಿಲ್ಲ. ಬೇರೆ ಧರ್ಮದ ವಾಕ್ಯ ಹೇಳಿದರೆ ಆ ಧರ್ಮಕ್ಕೆ ಸೇರಿದ ವ್ಯಕ್ತಿಯಾಗುತ್ತಾನೆಯೇ ಎಂದು ಮುಖ್ಯ ನ್ಯಾಯಮೂರ್ತಿ ತಪಭೃತ ಚಕ್ರವರ್ತಿ ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular