ಸರ್ವರ್ ಡೌನ್ ನಿಂದ ಸ್ಥಗಿತಗೊಂಡಿದ್ದ ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಸೇವೆ ಸಹಜ ಸ್ಥಿತಿಗೆ

ನವದೆಹಲಿ: ಮೆಟಾ ಸಂಸ್ಥೆಯ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಸೇವೆಗಳು ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ವಿಶ್ವವ್ಯಾಪಿ ಸ್ಥಗಿತಗೊಂಡಿದ್ದು, ಬಳಕೆದಾರರು ಪರದಾಡಿದ್ದಾರೆ.

ಅನೇಕ ವಾಟ್ಸಪ್ ಬಳಕೆದಾರರು ಸಂದೇಶಗಳನ್ನು ಸ್ವೀಕರಿಸಲು ಮತ್ತು ಕಳುಹಿಸಲು ತೊಂದರೆಯಾಗಿರುವುದಾಗಿ ವರದಿ ಮಾಡಿದ್ದಾರೆ. ವಾಟ್ಸಾಪ್ ವೆಬ್, ಫೇಸ್ಬುಕ್, ಫೇಸ್ಬುಕ್, ಇನ್ ಸ್ಟಾಗ್ರಾಂ ಲಾಗಿನ್ ತಡರಾತ್ರಿವರೆಗೂ ಸರಿಯಾಗುತ್ತಿರಲಿಲ್ಲ ಎಂದು ಬಳಕೆದಾರರು ದೂರಿದ್ದಾರೆ.

ಸೇವೆಗಳ ಸ್ಥಗಿತದಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆತಂಕ ಸೃಷ್ಟಿಯಾಗಿತ್ತು. ಸರ್ವರ್ ಡೌನ್ ಸಮಸ್ಯೆಯಿಂದಾಗಿ ಸ್ಥಗಿತಗೊಂಡಿದ್ದ ಸೇವೆಗಳು ಇದೀಗ ಸಹಜ ಸ್ಥಿತಿಗೆ ಮರಳಿವೆ ಎಂದು ಮೆಟಾ ಸಂಸ್ಥೆ ಮಾಹಿತಿ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read