HomeIndiaಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: 'ಗರೀಬ್ ಕಲ್ಯಾಣ ಅನ್ನ ಯೋಜನೆ'ಯಡಿ ಹೆಚ್ಚುವರಿ ಗೋಧಿ ವಿತರಣೆ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಗರೀಬ್ ಕಲ್ಯಾಣ ಅನ್ನ ಯೋಜನೆ’ಯಡಿ ಹೆಚ್ಚುವರಿ ಗೋಧಿ ವಿತರಣೆ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಲು ಅಕ್ಟೋಬರ್ ನಿಂದ ಗೋಧಿ ಹಂಚಿಕೆಯನ್ನು ಹೆಚ್ಚಳ ಮಾಡಲಾಗಿದೆ.

2022ರ ಮೇನಿಂದ ಯೋಜನೆಗೆ ನಿಗದಿಯಾಗಿದ್ದ 1.82 ಕೋಟಿ ಟನ್ ಗೋಧಿಯನ್ನು 71 ಲಕ್ಷ ಟನ್ ಗೆ ಮಿತಿಗೊಳಿಸಲಾಗಿತ್ತು. ದೇಶಿಯ ಮಟ್ಟದಲ್ಲಿ ಗೋಧಿ ಉತ್ಪಾದನೆ ಕಡಿಮೆಯಾಗಿದ್ದ ಕಾರಣ ಸರ್ಕಾರ ಈ ಕ್ರಮ ಕೈಗೊಂಡಿತ್ತು. ಇದೀಗ ಸರ್ಕಾರ 100 ದಿನಗಳನ್ನು ಪೂರ್ಣಗೊಳಿಸಿದ್ದು, ಯೋಜನೆಗೆ ಹೆಚ್ಚುವರಿಯಾಗಿ 35 ಲಕ್ಷ ಟನ್ ಗೋಧಿ ಹಂಚಿಕೆಗೆ ಒಪ್ಪಿಗೆ ನೀಡಲಾಗಿದೆ.

ಕೇಂದ್ರ ಆಹಾರ ಸಚಿವಾಲಯದ ಕಾರ್ಯದರ್ಶಿ ಸಂಜೀವ್ ಚೋಪ್ರಾ ಈ ಬಗ್ಗೆ ಮಾಹಿತಿ ನೀಡಿದ್ದು, ಮತ್ತೆ ಫಲಾನುಭವಿಗಳಿಗೆ ಗೋಧಿ ಮತ್ತು ಅಕ್ಕಿಯನ್ನು ಸಮ ಪ್ರಮಾಣದಲ್ಲಿ ವಿತರಿಸಲು ಸರ್ಕಾರ ಮುಂದಾಗಿದ್ದು, ಮುಂದಿನ ವರ್ಷದ ಮಾರ್ಚ್ ವರೆಗೂ ಈ ಹಂಚಿಕೆ ಕಾರ್ಯ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದಲ್ಲಿ 2023 -24ನೇ ಆರ್ಥಿಕ ವರ್ಷದಲ್ಲಿ 11.29 ಕೋಟಿ ಟನ್ ಗೋಧಿ ಉತ್ಪಾದನೆ ಆಗಿದ್ದು, ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ದೇಶದ 80 ಕೋಟಿ ಬಡವರಿಗೆ ಉಚಿತವಾಗಿ 5 ಕೆಜಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular