HomeKarnatakaಪೊಲೀಸ್ ಅಧಿಕಾರಿ ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ವ್ಯಕ್ತಿ ಬಲಿ

ಪೊಲೀಸ್ ಅಧಿಕಾರಿ ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ವ್ಯಕ್ತಿ ಬಲಿ

ಮೈಸೂರು: ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.

ಹಿಮ್ಮಾವು ಗ್ರಾಮದ ಗುರುಸ್ವಾಮಿ(65) ಮೃತಪಟ್ಟವರು. ಗೋವಿಂದರಾಜು ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂಜನಗೂಡಿನ ಸಂಚಾರ ಠಾಣೆ ಪಿಎಸ್ಐ ಯಾಸ್ಮಿನ್ ತಾಜ್ ಅವರ ಪುತ್ರ ಸೈಯದ್ ಐಮಾನ್ ಹಾಗೂ ಆತನ ಸ್ನೇಹಿತ ಪಂಕಜ್ ಬೈಕ್ ನಲ್ಲಿ ವ್ಹೀಲಿಂಗ್ ಮಾಡುತ್ತಾ ಬಂದು ರಸ್ತೆ ಬದಿ ಕುಳಿತಿದ್ದ ಗುರುಸ್ವಾಮಿಗೆ ಡಿಕ್ಕಿ ಹೊಡೆದಿದ್ದಾರೆ. ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ಗುರುಸ್ವಾಮಿ ಮತ್ತು ಗೋವಿಂದರಾಜು ರಸ್ತೆ ಬದಿ ಕುಳಿತಿದ್ದ ವೇಳೆ ಅತಿ ವೇಗವಾಗಿ ವ್ಹೀಲಿಂಗ್ ಮಾಡಿಕೊಂಡು ಬಂದು ಅವರ ಮೇಲೆ ಬೈಕ್ ಹರಿಸಿದ್ದಾರೆ.

ಗಾಯಗೊಂಡ ಗೋವಿಂದರಾಜು ಆಸ್ಪತ್ರೆಗೆ ದಾಖಲಾದರೆ ಗುರುಸ್ವಾಮಿ ಮೃತಪಟ್ಟಿದ್ದಾರೆ. ಸೈಯದ್ ಕೂಡ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular