HomeKarnatakaGruhalakshmi Scheme : `ಗೃಹಲಕ್ಷ್ಮೀ ಯೋಜನೆ' ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವಾಗ? ಇಲ್ಲಿದೆ ಮಾಹಿತಿ

Gruhalakshmi Scheme : `ಗೃಹಲಕ್ಷ್ಮೀ ಯೋಜನೆ’ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವಾಗ? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ರಾಜ್ಯದ ಮಹಿಳೆಯರ ಖಾತೆಗೆ ಹಣ ವರ್ಗಾವಣೆಯಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸದವರು, ಪಡಿತರ ಚೀಟಿಯಲ್ಲಿ ಯಜಮಾನಿ ಎಂದು ಹೆಸರು ಇರದೇ ಇರುವ ಮಹಿಳೆಯರು ರೇಷನ್ ಕಾರ್ಡ್ ನಲ್ಲಿ ಯಜಮಾನಿ ಎಂದು ತಿದ್ದುಪಡಿ ಮಾಡಲು ಸೆಪ್ಟೆಂಬರ್ 14 ರವರೆಗೆ ಅವಕಾಶ ನೀಡಲಾಗಿದೆ. ಹೀಗಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವವರು ತಪ್ಪದೇ ಯಜಮಾನಿ ಎಂದು ಬದಲಾವಣೆ ಮಾಡಿಕೊಳ್ಳುವಂತೆ  ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾಗದ ಮನೆಯ ಯಜಮಾನಿಯರು ಶೀಘ್ರವೇ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಅಟಲ್ ಜನಸ್ನೇಹಿ ಕೇಂದ್ರ, ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಯೋಜನೆಯಡಿ ನೋಂದಾಯಿಸಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 1902 ಕ್ಕೆ ಕರೆ ಮಾಡಬಹುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular