Viral Video | ಸನ್ನಿ ಡಿಯೋಲ್ ಜೊತೆ ಸೆಲ್ಫಿ ಕ್ಲಿಕ್ಕಿಸಲು ಮುಂದಾದ ಅಭಿಮಾನಿ; ನಂತರ ನಡೆದದ್ದು ಶಾಕಿಂಗ್‌ ಘಟನೆ

ನಟ ಸನ್ನಿ ಡಿಯೋಲ್ ಇತ್ತೀಚಿಗೆ ಬಿಡುಗಡೆಯಾದ ಗದರ್-2 ಯಶಸ್ಸಿನ ಆನಂದದಲ್ಲಿ ತೇಲುತ್ತಿದ್ದಾರೆ. ಇದೀಗ ನಟ ಚರ್ಚೆಯ ಕೇಂದ್ರ ಬಿಂದುವಾಗಿದ್ದಾರೆ. ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿ ಮೇಲೆ ಅವರು ರೇಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಈ ವಿಡಿಯೊವನ್ನು ಗಗನ್‌ದೀಪ್ ಸಿಂಗ್ ಎಂಬ ಟ್ವಿಟರ್ ಬಳಕೆದಾರರು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ, 65 ವರ್ಷದ ನಟ ತನ್ನ ಭದ್ರತಾ ಸಿಬ್ಬಂದಿಯೊಂದಿಗೆ ವಿಮಾನ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು.

ಈ ವೇಳೆ ಅಭಿಮಾನಿಯೊಬ್ಬರು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಮುಂದಾಗಿದ್ದಾರೆ. ಆದರೆ, ಸ್ಪಷ್ಟವಾದ ಸೆಲ್ಫಿ ಕ್ಲಿಕ್ಕಿಸಲು ಅಭಿಮಾನಿ ಸ್ವಲ್ಪ ಪರದಾಡುತ್ತಾನೆ. ಈ ವೇಳೆ ಸನ್ನಿ, ಬೇಗ ಸೆಲ್ಫಿ ತೆಗೆದುಕೊಳ್ಳುವಂತೆ ರೇಗಾಡಿದ್ದಾರೆ.

ಹಲವು ಬಳಕೆದಾರರು ನಟನ ವರ್ತನೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಇಂತಹ ದುರಹಂಕಾರಿ ವರ್ಗದ ಜನರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ನಿಲ್ಲಿಸಿದ್ರೆ ಎಲ್ಲವೂ ಸರಿಯಾಗುತ್ತದೆ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು ಜಯಾ ಬಚ್ಚನ್ ಅವರ ಪುರುಷ ಆವೃತ್ತಿ ಎಂದು ಕಿಡಿಕಾರಿದ್ದಾರೆ. ಜನರು ಈ ರೀತಿಯ ಜನರಿಗೆ ಏಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ ಎಂದು ಮೂರನೇ ಬಳಕೆದಾರರು ಪ್ರಶ್ನಿಸಿದ್ದಾರೆ.

ಅಂದಹಾಗೆ, ಸನ್ನಿ ಡಿಯೋಲ್ ಅವರ ಗದರ್-2 ಸಿನಿಮಾ ಬಾಕ್ಸ್ ಆಫೀಸ್ ದಾಖಲೆಗಳನ್ನು ಛಿದ್ರಗೊಳಿಸುತ್ತಿದೆ. ಆಗಸ್ಟ್ 11 ರಂದು ಬಿಡುಗಡೆಯಾದ ಈ ಚಿತ್ರ, ರಿಲೀಸ್ ಆದ 6 ದಿನಗಳಲ್ಲಿ 250 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ.

https://twitter.com/Gagan4344/status/1691839302219776216?ref_src=twsrc%5Etfw%7Ctwcamp%5Etweetembed%7Ctwterm%5E1691839302219776216%7Ctwgr%5E34d46bf8c205069182879eab6829a46f8953d55c%7Ctwcon%5Es1_&ref_url=https%3A%2F%2Fwww.indiatvnews.com%2Fentertainment%2Fcelebrities%2Fviral-video-when-sunny-deol-lost-his-cool-after-a-fan-tried-to-click-selfie-with-him-2023-08-17-887208

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read