HomeLatest Newsಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ ? ರಾಜ್ಯ ಸರ್ಕಾರಕ್ಕೆ...

ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ ? ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಲೇವಡಿ.!

ಬೆಂಗಳೂರು : ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಎಂದು ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಲೇವಡಿ ಮಾಡಿದೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ JDS ” ನಿಯಮಗಳ ಉಲ್ಲಂಘನೆ ನೆಪದಲ್ಲಿ ಬಿಡದಿಯ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಿದ್ದೀರಿ. ಒಪ್ಪಿಕೊಳ್ಳೋಣ. ಅದೇ ರೀತಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಸಿಎಂ @siddaramaiah, ಡಿಸಿಎಂ@DKShivakumarಅವರೇ.. ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ? ರಾಜ್ಯದ ಜನರ ಮೇಲೆ ನಿರಂತರವಾಗಿ ತೆರಿಗೆ ಬರೆ ಎಳೆದು ಲೂಟಿ ಹೊಡೆಯುತ್ತಿರುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ?”

”ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ? ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯನ್ನು ತಡೆಯಲು ಯಾವ ರೀತಿ ಬೀಗ ಹಾಕಿಸುತ್ತೀರಾ? ರಾಜ್ಯದ ಜನರ ತೆರಿಗೆ ಹಣವನ್ನು ಅಕ್ರಮವಾಗಿ ವಾಮಮಾರ್ಗಗಳ ಮೂಲಕ@INCIndia
ಹೈಕಮಾಂಡ್’ಗೆ ಕಪ್ಪ ಒಪ್ಪಿಸುತ್ತಿರುವುದಕ್ಕೆ ಯಾವಾಗ ಬೀಗ ಹಾಕಿಸುತ್ತೀರಾ?@INCKarnataka
ಸರ್ಕಾರದ 60% ಕಮಿಷನ್ ದಂಧೆಗೆ ಯಾವಾಗ ಬೀಗ ಹಾಕುತ್ತೀರಾ? ಕಾಂಗ್ರೆಸ್ ಶಾಸಕರು ಮತ್ತು ಕಾಂಗ್ರೆಸ್ ಪುಢಾರಿಗಳು ನಡೆಸುತ್ತಿರುವ ಕ್ಯಾಸಿನೋ ದಂಧೆ, ಅಕ್ರಮಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಕೈಲಾಗದವರು ಮೈಪರಚಿ ಕೊಂಡಂತೆ ಇದೆ ಕಾಂಗ್ರೆಸ್ ಸರ್ಕಾರದ ದುರಾಡಳಿತ” ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular