HomeLatest Newsಜನಪ್ರಿಯತೆ ಕುಗ್ಗಿದಾಗಲೆಲ್ಲ ಪ್ರಧಾನಿ ಮೋದಿಯಿಂದ ಮಾಸ್ಟರ್ ಸ್ಟ್ರೋಕ್ : ಸಚಿವ ಪ್ರಿಯಾಂಕ್ ಖರ್ಗೆ

ಜನಪ್ರಿಯತೆ ಕುಗ್ಗಿದಾಗಲೆಲ್ಲ ಪ್ರಧಾನಿ ಮೋದಿಯಿಂದ ಮಾಸ್ಟರ್ ಸ್ಟ್ರೋಕ್ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಜಾತಿಗಣತಿ ನಡೆಸುವ ಘೋಷಣೆಯನ್ನು ಬಿಜೆಪಿಗರು ಮಾಸ್ಟರ್ ಸ್ಟ್ರೋಕ್ ಎಂದು ಬಣ್ಣಿಸಲು ಆರಂಭಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವರು ಮೋದಿ ಅವರ ಜಾತಿಗಣತಿ ನಡೆಸುವ ಘೋಷಣೆಯನ್ನು ಬಿಜೆಪಿಗರು ಮಾಸ್ಟರ್ ಸ್ಟ್ರೋಕ್ ಎಂದು ಬಣ್ಣಿಸಲು ಆರಂಭಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ವಿಪರ್ಯಾಸವೆಂದರೆ ಇದೇ ಬಿಜೆಪಿ ನಾಯಕರು ಈವರೆಗೂ ಕಾಂಗ್ರೆಸ್ ಪ್ರತಿಪಾದಿಸುತ್ತಾ ಬಂದಿರುವ ಜಾತಿಗಣತಿ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದರು. ಈಗ ಅವರು ತಮ್ಮ ವರಸೆಯನ್ನು ಬದಲಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಪಹಲ್ಗಾಮ್ ದಾಳಿ ಬಳಿಕ ಮೋದಿ ಅವರನ್ನು ಜನಸಾಮಾನ್ಯರು ಪ್ರಶ್ನಿಸುತ್ತಿದ್ದಾರೆ. ಇವುಗಳಿಗೆ ಉತ್ತರ ನೀಡುವ ಸಾಮರ್ಥ್ಯ ಅವರಿಗೆ ಇಲ್ಲ. ಹೀಗಾಗಿ ಜನರು ಮತ್ತು ಮಾಧ್ಯಮದ ಗಮನವನ್ನು ಬೇರೆಡೆಗೆ ತಿರುಗಿಸಲು ಜಾತಿಗಣತಿ ಅಸ್ತ್ರ ಪ್ರಯೋಗಿಸಿದ್ದಾರೆ. ಭಯೋತ್ಪಾದನೆ ದಾಳಿಗೆ ಪ್ರತಿಕ್ರಿಯೆಯಾಗಿ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದರೆ, ಇವರು ಪಾಕಿಸ್ತಾನದ ಯೂಟ್ಯೂಬ್ ಚಾನೆಲ್ಗಳನ್ನು ಬ್ಯಾನ್ ಮಾಡಿದ್ದಾರೆ. ಪ್ರಧಾನಿ ಮೋದಿ ಅವರ ವರ್ತನೆ ಜನರಲ್ಲಿ ಬೇಸರ ಮೂಡಿಸಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular