ಬೆಂಗಳೂರು: ಸಂಬಂಧಿಕರ ಮನೆಗೆ ಬಂದಿದ್ದ ಮೂವರು ಮಕ್ಕಳು ವಿದ್ಯುತ್ ಶಾಕ್ ನಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಯಲ್ಲಮ್ಮ ನಗರದಲ್ಲಿ ಘಟನೆ ನಡೆದಿದೆ. ಖಾನಾಹೊಸಹಳ್ಳಿಯಿಂದ ಚಂದಾಪುರಕ್ಕೆ ಸಂಬಂಧಿಕರ ಮದುವೆಗೆ ಮಕ್ಕಳು ಬಂದಿದ್ದರು. ಮದುವೆಯ ಬಳಿಕ ಪೋಷಕರ ಜೊತೆಗೆ ಸಂಬಂಧಿಕರೊಬ್ಬರ ಮನೆಗೆ ತೆರಳಿದ್ದರು. ಅಲ್ಲಿ ಮಕ್ಕಳು ಆಟವಾಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಗಾಯಗೊಂಡಿದ್ದಾರೆ. ವಿದ್ಯುತ್ ಕಂಬಕ್ಕೆ ಅಳವಡಿಸಿರುವ ತಂತಿ ತಗುಲಿ ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.