HomeLatest NewsBREAKING: ದೇಶವೇ ಶೋಕಾಚರಣೆಯಲ್ಲಿರುವಾಗ ಸಿಪಿಐ ಸಂಭ್ರಮಾಚರಣೆ

BREAKING: ದೇಶವೇ ಶೋಕಾಚರಣೆಯಲ್ಲಿರುವಾಗ ಸಿಪಿಐ ಸಂಭ್ರಮಾಚರಣೆ

ತುಮಕೂರು: ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ರೆಸಾರ್ಟ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ 25 ಪ್ರವಾಸಿಗರು ಮತ್ತು ಸ್ಥಳೀಯ ಮಾರ್ಗದರ್ಶಿಯನ್ನು ಗುಂಡಿಕ್ಕಿ ಕೊಂದಿದ್ದು, ಇಡೀ ದೇಶವೇ ಶೋಕಾಚರಣೆಯಲ್ಲಿದೆ.

ಹೀಗೆ ದೇಶವೇ ಶೋಕಾಚರಣೆಯಲ್ಲಿರುವಾಗ ಇನ್ಸ್ಪೆಕ್ಟರ್ ಸಂಭ್ರಮಾಚರಣೆ ನಡೆಸಿದ್ದಾರೆ. ತುಮಕೂರು ಸಿಪಿಐ ಬಿ.ಎಸ್. ದಿನೇಶ್ ಕುಮಾರ್ ಸಂಭ್ರಮಾಚರಣೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ತುಮಕೂರಿನಿಂದ ಕುಶಾಲನಗರಕ್ಕೆ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತೆರೆದ ಜೀಪಿನಲ್ಲಿ ಸಿಪಿಐ ರ್ಯಾಲಿ ಮಾಡಿ ರೋಡ್ ಶೋ ನಡೆಸಿದ್ದಾರೆ. ಕ್ರೇನ್ ನಲ್ಲಿ ಹಾರ ಹಾಕಿಸಿಕೊಂಡು ಬಿ.ಎಸ್. ದಿನೇಶ್ ರೋಡ್ ಶೋ ಮಾಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular