ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪೌರಕಾರ್ಮಿಕನ ಮೇಲೆ ವಲಸಿಗ ಮಹಿಳೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ.
ಟೀ ಕಪ್ ಅನ್ನು ರಸ್ತೆಯ ಬದಿ ಎಸೆಯಬೇಡಿ ಎಂದು ಹೇಳಿದ್ದಕ್ಕೆ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಟೀ ಕಪ್ ಗಳನ್ನು ಡ್ಸ್ ಬಿನ್ ನಲ್ಲಿ ಹಾಕಿ ಎಂದಿದ್ದಕ್ಕೆ ಕೇರಳ ಮೂಲದ ವೈದೇಹಿ ಎಂಬ ಯುವತಿ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾರೆ. ಪೌರ ಕಾರ್ಮಿಕನಿಗೆ ಅವಾಚ್ಯ ಶಬ್ದದಿಂದ ನಿಂದಿಸಿ ಕೈಸನ್ನೆ ಮಾಡಿ ಕಲ್ಲಿನಿಂದ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.
ಗೆಳೆಯನ ಜೊತೆಗೆ ರಸ್ತೆ ಬದಿಯಲ್ಲಿ ಯುವತಿ ಟೀ ಕುಡಿಯುತ್ತ ಕುಳಿತಿದ್ದರು. ವೇಳೆ ಟೀ ಕುಡಿದು ರಸ್ತೆ ಬದಿ ಕಪ್ ಗಳನ್ನು ಯುವಕ, ಯುವತಿ ಎಸೆದಿದ್ದಾರೆ. ಅವುಗಳನ್ನು ಬುಟ್ಟಿಗೆ ಹಾಕಿ ಎಂದು ಸ್ವಚ್ಛತಾ ಸಿಬ್ಬಂದಿ ಹೇಳಿದ್ದಾರೆ. ಇಷ್ಟಕ್ಕೆ ಸಿಟ್ಟಾಗಿ ಪೌರಕಾರ್ಮಿಕನ ಮೇಲೆ ಯುವತಿ ಹಲ್ಲೆ ಮಾಡಿದ್ದಾರೆ.
ನಿನ್ನೆ ಬೆಳಗ್ಗೆ ಪಟ್ಟಂದೂರು ಅಗ್ರಹಾರದ ಕುವೆಂಪು ರಸ್ತೆಯಲ್ಲಿ ಘಟನೆ ನಡೆದಿದೆ. ಪೌರಕಾರ್ಮಿಕನ ದೂರಿನ ಮೇರೆಗೆ ಯುವಕ ಮತ್ತು ಯುವತಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಭಂದ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭದ್ರಾವತಿ: ಜಂಟಿ ಕಾರ್ಯಾಚರಣೆ – 03 ಬಾಲಕಾರ್ಮಿಕರು ಹಾಗೂ 02 ಕಿಶೋರ ಕಾರ್ಮಿಕರ ರಕ್ಷಣೆ
ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿ ಬಾಲಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ದಿನಾಂಕ 09-09-2026 ರಂದು ಜಂಟಿ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿ, ಒಟ್ಟು 05 ಮಕ್ಕಳನ್ನು ರಕ್ಷಿಸಲಾಗಿದೆ.
ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಆಶ್ರಿತಾ ಸ್ವಯಂ ಸೇವಾ ಸಂಸ್ಥೆ (ಭದ್ರಾವತಿ) ಇವರುಗಳ ಜಂಟಿ ಭಾಗವಹಿಸುವಿಕೆಯೊಂದಿಗೆ ಈ ಕಾರ್ಯಾಚರಣೆ ನಡೆಯಿತು.
ಭದ್ರಾವತಿ ನಗರದ ವಿವಿಧ ವಾಣಿಜ್ಯ ಸಂಸ್ಥೆಗಳು, ಗ್ಯಾರೇಜುಗಳು ಹಾಗೂ ಗ್ರಾಮೀಣ ಪ್ರದೇಶದ ಅಲೆಮಾರಿ ತಾಣಗಳಲ್ಲಿ ಕೈಗೊಂಡ ವಿಶೇಷ ಪರಿಶೀಲನೆ ವೇಳೆ 03 ಬಾಲಕಾರ್ಮಿಕರು ಹಾಗೂ 02 ಕಿಶೋರ ಕಾರ್ಮಿಕರು ಕೆಲಸ ಮಾಡುತ್ತಿರುವುದು ಕಂಡುಬಂದಿದೆ. ರಕ್ಷಿಸಲ್ಪಟ್ಟ ಮಕ್ಕಳನ್ನು ತಕ್ಷಣವೇ ಕೆಲಸದ ಸ್ಥಳದಿಂದ ಬಿಡುಗಡೆಗೊಳಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿ ದಾಖಲಿಸಲಾಗಿದೆ.
ಬಾಲಕಾರ್ಮಿಕ ನಿಷೇಧ: 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ಯಮಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.
ಶಿಕ್ಷೆ ಮತ್ತು ದಂಡ: ಬಾಲಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 20,000 ರೂ. ನಿಂದ 50,000 ರೂ. ಗಳವರೆಗೆ ದಂಡ (ಅಥವಾ ಎರಡನ್ನೂ) ವಿಧಿಸಬಹುದು. ಅಪರಾಧ ಪುನರಾವರ್ತನೆಯಾದರೆ 1 ರಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ಪುನರ್ವಸತಿ ನಿಧಿ: ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಪ್ಪು ಎಸಗಿದ ಮಾಲೀಕರು ಪ್ರತಿಯೊಂದು ಮಗುವಿಗೆ 20,000 ರೂ. ಗಳನ್ನು ಮಕ್ಕಳ ಪುನರ್ವಸತಿ ಕಲ್ಯಾಣ ನಿಧಿಗೆ ಪಾವತಿಸಬೇಕಾಗುತ್ತದೆ.
ಶಿಕ್ಷಣದ ಹಕ್ಕು: ಉಚಿತ ಮತ್ತು ಕಡ್ಡಾಯ ಶಿಕ್ಷಣವು ಪ್ರತಿಯೊಂದು ಮಗುವಿನ ಹಕ್ಕಾಗಿದ್ದು, ಇದನ್ನು ಒದಗಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.
ದೂರು ಸಲ್ಲಿಸಬಹುದಾದ ಇಲಾಖೆಗಳು: ಪೋಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ದೂರು ನೀಡಬಹುದು.
ಸಹಾಯವಾಣಿ ಸಂಖ್ಯೆಗಳು:
ಮಕ್ಕಳ ಸಹಾಯವಾಣಿ: 1098
ಕಾರ್ಮಿಕರ ಸಹಾಯವಾಣಿ: 155214
ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ (ಬೆಂಗಳೂರು): 080-22115291/92 ನ್ನು ಸಂಪರ್ಕಿಸಬಹುದು.
ದಾಳಿ ವೇಳೆ ಮೇಲ್ಕಂಡ ವಿಷಯಗಳು ಹಾಗೂ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರ ಕುರಿತು ಮಾಲೀಕರಿಗೆ ಕಾನೂನು ಅರಿವು ಮೂಡಿಸಲಾಯಿತು.
ಈ ಜಂಟಿ ಕಾರ್ಯಾಚರಣೆಯಲ್ಲಿ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ಆಶ್ರಿತಾ ಸ್ವಯಂ ಸೇವಾ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

