ಹಗರಣಗಳ ಕಪ್ಪು ಚುಕ್ಕೆಗಳನ್ನು ಅಳಿಸಿಕೊಳ್ಳಲು ‘ವೈಟ್ನರ್’ ಬೇಕಾಗಿದೆ : CM ವಿರುದ್ಧ ಬಿಜೆಪಿ ಪೋಸ್ಟರ್ ವಾರ್..!

ಬೆಂಗಳೂರು : ಹಗರಣಗಳ ಕಪ್ಪು ಚುಕ್ಕೆಗಳನ್ನು ಅಳಿಸಿಕೊಳ್ಳಲು ‘ವೈಟ್ನರ್’ ಬೇಕಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಸಿಎಂ ವಿರುದ್ಧ ಬಿಜೆಪಿ ಪೋಸ್ಟರ್ ವಾರ್ ಮುಂದುವರೆಸಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಹಗರಣಗಳ ಕಪ್ಪು ಚುಕ್ಕೆಗಳನ್ನು ಅಳಿಸಿಕೊಳ್ಳಲು ವೈಟ್ನರ್ ಬೇಕಾಗಿದೆ. ಕಳುಹಿಸಬೇಕಾದ ವಿಳಾಸ:- ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿ, ಬೆಂಗಳೂರು ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಸಿಎಂ ಸಿದ್ದರಾಮಯ್ಯನವರು ಅರಳು ಮರಳಿನ ಸ್ಥಿತಿಯಲ್ಲಿದ್ದಾರೆ. ತಮ್ಮ ಪತ್ನಿ ಬರೆದ ಪತ್ರದ ಕುರಿತು ತಮಗೇನೂ ಗೊತ್ತಿಲ್ಲವೆಂದು ಸುಳ್ಳು ಹೇಳುತ್ತಿದ್ದಾರೆ. ಪತ್ರದಲ್ಲಿನ ಒಂದು ಸಾಲನ್ನು ವೈಟ್ನರ್ ನಿಂದ ಅಳಿಸಿದ್ದೇಕೆ ? ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.ಯಾವುದೇ ಜನಪರ ಯೋಜನೆಗಳನ್ನು ಜಾರಿಗೊಳಿಸದ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿ, ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ. ಜನರ ದಾರಿ ತಪ್ಪಿಸಲು ದೆಹಲಿಯಲ್ಲಿ ಪ್ರತಿಭಟನೆಯ ನಾಟಕ ಮಾಡಿದೆ. ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನಿಲುವುಗಳ ವಿರುದ್ಧ ರಾಜ್ಯ ಬಿಜೆಪಿಯಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ಕುರಿತು ಚಿಂತಿಸಲಾಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.

https://twitter.com/BJP4Karnataka/status/1827016012690231667

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read