HomeKarnatakaಬೆಳಗಾವಿ ಏಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿಲ್ಲ?

ಬೆಳಗಾವಿ ಏಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿಲ್ಲ?

ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಖಾತೆ ಸಚಿವ ಎಂ.ಬಿ.ಪಾಟೀಲ್ ಕಳೆದ ವಾರ ಬೆಳಗಾವಿ ಅಥವ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ಎಂದು ಘೋಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.

ಈಗ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಈ ಕುರಿತು ಮಾತನಾಡಿದ್ದಾರೆ. ‘ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮಾಡಲು ವಿಮಾನ ಹಾರಾಟಕ್ಕೆ ಕೆಲವೊಂದು ಮೂಲ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದಲ್ಲಿ ಮಾತ್ರ ಈ ಬೇಡಿಕೆಯನ್ನು ಈಡೇರಿಸಲು ಸಾಧ್ಯವೆಂದು ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ರಾಮ್ ಮೋಹನ್ ನಾಯ್ಡು ಅವರು ನನಗೆ ಪತ್ರ ಬರೆಯುವ ಮೂಲಕ ತಿಳಿಸಿದ್ದಾರೆ’ ಎಂದು ಹೇಳಿದ್ದಾರೆ.

‘ಶ್ರೀ ಎಂ. ಬಿ ಪಾಟೀಲ ಮಾನ್ಯ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಅಭಿವೃದ್ಧಿ ಸಚಿವರು, ಕರ್ನಾಟಕ ಸರಕಾರ ಇವರು ಈ ವಿಷಯದ ಬಗ್ಗೆ ದಿನಾಂಕ 12-08-2025 ರಂದು ಬರೆದ ಪತ್ರದ ಪ್ರತಿಯನ್ನು ಲಗತ್ತಿಸಿ, ನಾನು ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮಾಡುವ ಅವಶ್ಯಕತೆಯ ಬಗ್ಗೆ ವಿಷಯವನ್ನು ಪ್ರಸ್ತಾಪಿಸಿ, ಕೇಂದ್ರ ವಿಮಾನಯಾನ ಸಚಿವರಿಗೆ ದಿನಾಂಕ 03-02-2026 ರಂದು ಭೇಟಿಯಾಗಿ ಮನವಿ ಪತ್ರ ನೀಡಿದ್ದು ಇಲ್ಲಿ ಸ್ಮರಣೀಯ’

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಇದಕ್ಕೆ ಉತ್ತರವಾಗಿ ಕೇಂದ್ರ ವಿಮಾನಯಾನ ಸಚಿವರು ಸಂಸದರಿಗೆ ದಿನಾಂಕ 12-03-2026 ಪತ್ರ ಬರೆದಿದ್ದು, ಇದರಲ್ಲಿ ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮಾಡಲು ಕೆಲವು ಮೂಲ ಹಾಗೂ ಅಗತ್ಯ ಸೌಲಭ್ಯಗಳ ಲಭ್ಯತೆ ಅವಶ್ಯವಿರುವುದನ್ನು ತಿಳಿಸಿದ್ದಾರೆ’ ಎಂದು ಶೆಟ್ಟರ್ ಹೇಳಿದ್ದಾರೆ.

ಅಗತ್ಯ ಸೌಲಭ್ಯಗಳು

  • ರನ್‌ವೇ ಉದ್ದಳತೆ
  • ಇನ್ಸಟ್ರುಮೇಂಟ್ ಲ್ಯಾಂಡಿಗ್ ಸಿಸ್ಟಮ್
  • ಲೈಟಿಂಗ್ ವ್ಯವಸ್ಥೆ ಮತ್ತು ಅಗತ್ಯ ಸೇವೆಗಳು
  • ವಲಸೆ (Immigration) ಆರೋಗ್ಯ, ಪ್ರಾಣಿ ಮತ್ತು ಸಸ್ಯ ಕ್ವಾರಂಟೈನ್‌ನಂತಹ ಅಗತ್ಯ ಸೇವೆಗಳನ್ನು ಒಳಗೊಂಡಂತೆ) ಹೊರ ದೇಶಕ್ಕೆ ತೆರಳಲಿರುವ ಪ್ರಯಾಣಿಕರ ಸಂಖ್ಯಾಬಲ ಹೀಗೆ ಇನ್ನು ಇತ್ಯಾದಿ ವಿಷಯಗಳ ಬಗ್ಗೆ ಮಹಿತಿಯನ್ನು ಗಣನೆಗೆ ತೆಗೆದುಕೊಳ್ಳಬೇಕಾಗುವುದು.

‘ಈ ಎಲ್ಲ ಅಂಶಗಳ ಪರಿಗಣನೆಯೊಂದಿಗೆ ವಿಮಾನಯಾನ ಸಂಸ್ಥೆಗಳು ಹಾರಾಟ ಪ್ರಾರಂಭಿಸಲು ಮುಂದೆ ಬಂದಲ್ಲಿ ಮುಂಬರುವ ದಿನಗಳಲ್ಲಿ ಅವಶ್ಯವಾಗಿ ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಪರಿವರ್ತಿಸಲು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಅನುಕೂಲಕರವೆಂದು ಕೇಂದ್ರ ಸಚಿವರು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ’ ಎಂದು ಜಗದೀಶ್ ಶೆಟ್ಟರ್ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular