ತಮಗೆ ‘ಶಿವಕುಮಾರ್’ ಎಂಬ ಹೆಸರು ಏಕೆ ಬಂತು..? ಸ್ವಾರಸ್ಯಕರ ಸಂಗತಿ ಬಿಚ್ಚಿಟ್ಟ ಡಿಸಿಎಂ ಡಿಕೆಶಿ.!

ಬೆಂಗಳೂರು : ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಅವರು ತಮಗೆ ಡಿಕೆ ಶಿವಕುಮಾರ್ ಎಂಬ ಹೆಸರು ಏಕೆ ಬಂತು..? ಎಂಬ ಸಂಗತಿಯನ್ನು ಎಲ್ಲರೆದುರು ಬಿಚ್ಚಿಟ್ಟಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಶಿವಭಕ್ತಿಯ ಶಿಖರ! ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡೆ. @SadhguruJV
ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಈ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಅನಿಸಿತು. ನನ್ನ ಹೆಸರಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ. ದೊಡ್ಡ ಆಲಹಳ್ಳಿಯಲ್ಲಿ ಶಿವಾಲ್ದಪ್ಪನ ಬೆಟ್ಟ ಇದೆ. ನಮ್ಮ ಮನೆಯಲ್ಲಿ ಯಾರೇ ಹುಟ್ಟಿದರೂ ಮೊದಲು ಹೆಣ್ಮಕ್ಕಳಿಗೆ ಕೆಂಪಮ್ಮ ಅಂತ ಹೆಸರಿಡುತ್ತಾರೆ. ಗಂಡು ಮಕ್ಕಳಿಗೆ ಕೆಂಪೇಗೌಡ ಅಂತ ಹೆಸರಿಡುತ್ತಾರೆ. ಅದು ಪದ್ದತಿ. ಶಿವಾಲ್ದಪ್ಪನಿಗೆ ನನ್ನ ತಾಯಿ ಹರಕೆ ಮಾಡಿಕೊಂಡಿದ್ದರು. ನಾನು ಹುಟ್ಟಿದ್ದಕ್ಕೆ ನನಗೆ ಮೊದಲು ಕೆಂಪರಾಜ್ ಅಂತ ಹೆಸರಿಟ್ಟು, ಆನಂತರ ಶಿವಾಲ್ದಪ್ಪನಿಗಾಗಿ ಶಿವಕುಮಾರ್ ಅಂತ ಹೆಸರಿಟ್ಟರು ಎಂದು ಪೋಸ್ಟ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read