‘ಅರೆಸ್ಟ್ ವಾರೆಂಟ್’ ಬಂದಿದ್ರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ. ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಪದೇ ಪದೇ ಹರಾಜಾಗುತ್ತಿದೆ. ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ಆದರೆ ಮಾಧ್ಯಮಗಳು ಈ ಬಗ್ಗೆ ಮಾತನಾಡುತ್ತಿಲ್ಲ. ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ತೋರಿಸಬೇಕು ಎಂದರು.

ಇನ್ನೂ, ಕೇಂದ್ರ ಸರ್ಕಾರ ನಬಾರ್ಡ್ ಸಾಲದ ಮೊತ್ತವನ್ನು ಭಾರೀ ಪ್ರಮಾಣದಲ್ಲಿ ಕಡಿತ ಮಾಡಿರುವುದರಿಂದ ನಾಡಿನ ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪ್ರಮಾಣದ ಸಾಲ ದೊರೆಯದೆ ಕೃಷಿಯ ಜೊತೆಗೆ ರೈತರ ಬದುಕು ಬಡವಾಗಲಿದೆ. ಈ ಅನ್ಯಾಯವನ್ನು ಸರಿಪಡಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಅವರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read