ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಯ ವ್ಯಾಲಿಡಿಟಿ ಅಂತ್ಯಕ್ಕೆ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹತಾಶೆ ಬಹುವಾಗಿ ಕಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಪರಿಜ್ಞಾನವೂ ಇಲ್ಲವೆಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ.
ಮನೆಮಂದಿಯ ಮೇಲೆ ರೇಗಾಡುವ ಹಾಗೆ ಸರ್ಕಾರಿ ಅಧಿಕಾರಿಗಳ ಮೇಲೆ ರೇಗಾಡುತ್ತಿದ್ದಾರೆ, ಪೊಲೀಸ್ ಅಧಿಕಾರಿಯ ಮೇಲೆ ಕೈ ಎತ್ತುತ್ತಿದ್ದಾರೆ, ಮಹಿಳೆಯರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ದರ್ಪದಿಂದ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆದುಕೊಳ್ಳುತ್ತಿರುವುದು ಮುಖ್ಯಮಂತ್ರಿ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ.
ಮಾನ್ಯ ಸಿದ್ದರಾಮಯ್ಯ ಅವರೇ, ನಿಮ್ಮ ಗೂಂಡಾಗಿರಿಗೆ ಕೊನೆಯೆಂದು? ನಿಮ್ಮ ಮೇಲೆ ರೌಡಿ ಶೀಟರ್ ಏಕೆ ತೆರೆಯಬಾರದು? ಎಂದು ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ.
ಮುಖ್ಯಮಂತ್ರಿ ಕುರ್ಚಿಯ ವ್ಯಾಲಿಡಿಟಿ ಅಂತ್ಯಕ್ಕೆ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ @siddaramaiah ಅವರಿಗೆ ಹತಾಶೆ ಬಹುವಾಗಿ ಕಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಪರಿಜ್ಞಾನವೂ ಇಲ್ಲವೆಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ.
— BJP Karnataka (@BJP4Karnataka) April 29, 2025
ಮನೆಮಂದಿಯ ಮೇಲೆ ರೇಗಾಡುವ ಹಾಗೆ ಸರ್ಕಾರಿ ಅಧಿಕಾರಿಗಳ ಮೇಲೆ ರೇಗಾಡುತ್ತಿದ್ದಾರೆ, ಪೊಲೀಸ್… pic.twitter.com/Pjy1UiVZn2