ಬುದ್ಧಿ ಕಲಿಸಲು ಪತಿಯ ಖಾಸಗಿ ಅಂಗವನ್ನೇ ಕಚ್ಚಿ ಗಾಯಗೊಳಿಸಿದ ಪತ್ನಿ…..!

ಉತ್ತರ ಪ್ರದೇಶದ ಹಮೀರ್ಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ತನ್ನ ಪತಿಯ ಖಾಸಗಿ ಅಂಗವನ್ನು ಕಚ್ಚಿ ಗಾಯಗೊಳಿಸಿದ್ದಾಳೆ. ಆತ ಅಸ್ವಾಭಾವಿಕವಾಗಿ ದೈಹಿಕ ಸಂಬಂಧ ಬೆಳೆಸುತ್ತಿದ್ದ ಎನ್ನುವ ಕಾರಣಕ್ಕೆ ಪತ್ನಿ ಈ ಕೆಲಸ ಮಾಡಿರೋದಾಗಿ ಒಪ್ಪಿಕೊಂಡಿದ್ದಾಳೆ. ಎಷ್ಟೇ ಹೇಳಿದ್ರು ಪತಿ ಮೃಗದಂತೆ ವರ್ತಿಸುತ್ತಿದ್ದ. ಇದ್ರಿಂದ ಕೋಪಗೊಂಡು ಆತನ ಖಾಸಗಿ ಅಂಗವನ್ನು ಕಚ್ಚಿದ್ದಾಗಿ ಪತ್ನಿ ಹೇಳಿದ್ದಾಳೆ.

ಘಟನೆ ಶನಿವಾರ ನಡೆದಿದ್ದು, ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹಮೀರ್ಪುರದ ಹಳ್ಳಿಯೊಂದರಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಪತಿ ವಯಸ್ಸು 27 ವರ್ಷ. ದಂಪತಿಗೆ ಮೂರು ಮಕ್ಕಳಿದ್ದಾರೆ. ಶನಿವಾರ ರಾತ್ರಿ ಪತಿ, ತನ್ನ ಕುಟುಂಬದ ಜೊತೆ ಆಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಭಾನುವಾರ ಬೆಳಿಗ್ಗೆ ಪತ್ನಿಯೇ ಠಾಣೆಗೆ ಬಂದು ವಿಷ್ಯ ತಿಳಿಸಿದ್ದಾಳೆ.

ಸದ್ಯ ಆಕೆಯನ್ನು ಪೊಲೀಸ್‌ ಕಸ್ಟಡಿಯಲ್ಲಿ ಇಡಲಾಗಿದೆ. ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಪತಿ ಅಸ್ವಾಭಾವಿಕವಾಗಿ ಅನೇಕ ಬಾರಿ ದೈಹಿಕ ಸಂಬಂಧ ಬೆಳೆಸಿದ್ದ ಎಂದು ಮಹಿಳೆ ಹೇಳಿದ್ದಾಳೆ. ಇದೊಂದು ಖಾಯಿಲೆಯಾಗಿದ್ದು, ಇದಕ್ಕೆ ಮಾನಸಿಕ ಚಿಕಿತ್ಸೆಯೂ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read