ನವದೆಹಲಿ: ಪತಿ ಮಹಾಶಯನೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ದೆಹಲಿಯ ಕರವಾಲ್ ನಗರ ಪ್ರದೇಶದಲ್ಲಿ ನಡೆದಿದೆ.
ಪ್ರದೀಪ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದಿರುವ ಆರೋಪಿ. ಪತಿ-ಪತ್ನಿ ನಡುವೆ ಗಲಾಟೆಯಾಗಿತ್ತು. ಇದೇ ಕಾರಣಕ್ಕಾಗಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದಿದ್ದಾನೆ ಎನ್ನಲಾಗಿದೆ. ಪತ್ನಿ ಜಯಶ್ರೀ ಹಾಗೂ 5 ಹಾಗೂ 7 ವರ್ಷದ ಹೆಣ್ಣುಮಕ್ಕಳನ್ನು ಕೊಲೆಗೈದು ಪ್ರದೀಪ್ ತಲೆಮರೆಸಿಕೊಂಡಿದ್ದಾನೆ.
ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರದೀಪ್ ಪತ್ತೆಗಾಗಿ ಶೋಧ ನಡೆಸಿದ್ದಾರೆ.