HomeKarnatakaBIG NEWS: ಸೀರೆಯಿಂದ ಪತ್ನಿಯ ಉಸಿರುಗಟ್ಟಿಸಿ ಕೊಂದು ಆತ್ಮಹತ್ಯೆಗೆ ಶರಣಾದನಾ ಪತಿ? ಅನುಮಾನಾಸ್ಪದ ರೀತಿಯಲ್ಲಿ ದಂಪತಿ...

BIG NEWS: ಸೀರೆಯಿಂದ ಪತ್ನಿಯ ಉಸಿರುಗಟ್ಟಿಸಿ ಕೊಂದು ಆತ್ಮಹತ್ಯೆಗೆ ಶರಣಾದನಾ ಪತಿ? ಅನುಮಾನಾಸ್ಪದ ರೀತಿಯಲ್ಲಿ ದಂಪತಿ ಶವ ಪತ್ತೆ

ವಿಜಯಪುರ: ಸೀರೆಯಿಂದ ಕತ್ತು ಬಿಗಿದುಕೊಂಡ ರೀತಿಯಲ್ಲಿ ಪತ್ನಿ ಹಾಗೂ ನೇಣು ಬಿಗಿದುಕೂಂಡ ರೀತಿಯಲ್ಲಿ ಪತಿ ಇಬ್ಬರೂ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲುಕಿನ ಗೆದ್ದಲಮರಿ ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ ಹರನಾಳ ಹಾಗೂ ಪತ್ನಿ ಮೇಘಾ ಮೃತರು. ಎಂಟು ವರ್ಷಗಳ ಹಿಂದೆ ಸಿದ್ದಪ್ಪ ಹಾಗೂ ಮೇಘಾ ವಿವಾಹವಾಗಿದ್ದರು. ಸಿದ್ದಪ್ಪನೇ ಮೇಘಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಮೇಘಾಳ ತಾಯಿ ಅಳಿಯನೇ ಮಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ. ಸಿದ್ದಪ್ಪನ ತಾಯಿ ಶಾಂತಮ್ಮ ಹಾಗೂ ಸಹೋದರ ಶ್ರೀಕಾಂತ್ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ಈಗ ಪತ್ನಿಯೇನ್ನೇ ಕೊಂದಿದ್ದಾನೆ. ಮಕ್ಕಳು ಅನಾಥರಾಗಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುದ್ದೆಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular