HomeLatest Newsಅಕ್ರಮ ಸಂಬಂಧಕ್ಕೆ ಅಡ್ಡಿ: ತಡರಾತ್ರಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದ ಪತ್ನಿ

ಅಕ್ರಮ ಸಂಬಂಧಕ್ಕೆ ಅಡ್ಡಿ: ತಡರಾತ್ರಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದ ಪತ್ನಿ

ಕಲಬುರಗಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಭಾಗೋಡಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ತಿಪ್ಪಣ್ಣ ಕುಪೇಂದ್ರ(30) ಕೊಲೆಯಾದ ವ್ಯಕ್ತಿ. ಪತ್ನಿ ಶಾಂತಮ್ಮ ತಡರಾತ್ರಿ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ತಿಪ್ಪಣ್ಣನ ಮುಖಕ್ಕೆ ದಿಂಬು ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಪತ್ನಿ ಮತ್ತು ಆಕೆಯ ಪ್ರಿಯಕರ ಮುಖಕ್ಕೆ ದಿಂಬು ಒತ್ತುತ್ತಿದ್ದಂತೆ ತಿಪ್ಪಣ್ಣ ಜೋರಾಗಿ ಕಿರುಚಾಡಿದ್ದಾರೆ.

ಕಿರುಚಾಟ ಕೇಳಿದ ಅಕ್ಕ-ಪಕ್ಕದವರು ಮನೆ ಬಾಗಿಲು ಬಡಿದಿದ್ದು, ಬಾಗಿಲು ತೆರೆಯದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಬರುತ್ತಿದ್ದಂತೆ ಪ್ರಿಯಕರ ಮನೆಯ ಅಟ್ಟದ ಮೇಲಿನ ಕಿಟಕಿಯಿಂದ ಪರಾರಿಯಾಗಿದ್ದಾನೆ. ಪೊಲೀಸರು ಶಾಂತಮ್ಮಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular