ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ದೂರು ಕೊಟ್ಟ ಪತಿಯೇ ಪೊಲೀಸರ ಅತಿಥಿ

ಬೆಂಗಳೂರು: ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ ಪತಿಯೇ ಪೊಲೀಸರಿಂದ ಬಂದನಕ್ಕೆ ಒಳಗಾದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಅನಾಥ ಯುವತಿ ವೀಣಾಗೆ ಬಾಳು ಕೊಡುವುದಾಗಿ ಮದುವೆಯಾಗಿದ್ದ ರವಿ ಎಂಬಾತ ಎರಡು ವರ್ಷ ಆಕೆಯೊಂದಿಗೆ ದಾಂಪತ್ಯ ಜೀವನ ನಡೆಸಿದ್ದಾನೆ. ಗಾರ್ಮೆಂಟ್ ಕೆಲಸಕ್ಕೆ ಹೋಗಿದ್ದ ಪತ್ನಿ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾನೆ. ದೊಡ್ಡಬಳ್ಳಾಪುರದ ಕರೇನಹಳ್ಳಿಯ 19 ವರ್ಷದ ವೀಣಾ ಏಪ್ರಿಲ್ 22ರಂದು ನಾಪತ್ತೆಯಾಗಿದ್ದು, ಆಕೆಯ ಪತಿ ರವಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರಿಗೆ ದೂರು ನೀಡಿದ್ದ.

ವೀಣಾ ನಾಪತ್ತೆಯಾದ ಒಂದು ವಾರದ ನಂತರ ತೂಬಗೆರೆ ನರಸಿಂಹನಹಳ್ಳಿ ಅರಣ್ಯ ಪ್ರದೇಶದಲ್ಲಿ ಸುಟ್ಟು ಕರಕಲಾದ ಅಪರಿಚಿತ ಶವ ಪತ್ತೆಯಾಗಿದೆ. ತನಿಖೆ ಕೈಗೊಂಡ ಪೊಲೀಸರಿಗೆ ಅದು ವೀಣಾ ಅವರ ಶವ ಎನ್ನುವುದು ಗೊತ್ತಾಗಿದೆ. ಸಂಬಂಧಿಕರು ಕೂಡ ಶವ ವೀಣಾ ಅವರದು ಎಂದು ಗುರುತಿಸಿದ್ದಾರೆ. ಆಕೆಯ ಅತ್ತೆ ಮಾವ ಪತಿ ಮತ್ತು ಸಂಬಂಧಿಕರ ವಿಚಾರಣೆ ನಡೆಸಿದಾಗ ಪತಿ ರವಿಯೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ನೆರೆಮನೆಯ ಮಹಿಳೆಯೊಂದಿಗೆ ರವಿ ಅಕ್ರಮ ಸಂಬಂಧ ಹೊಂದಿದ್ದ ವಿಚಾರ ವೀಣಾಗೆ ಗೊತ್ತಾಗಿದ್ದರಿಂದ ಮನೆಯಲ್ಲಿ ಜಗಳವಾಗುತ್ತಿತ್ತು. ರವಿ ಪೋಷಕರು ಕೂಡ ಬುದ್ಧಿವಾದ ಹೇಳಿ ಸುಮ್ಮನಾಗಿದ್ದರು. ಏ. 22ರಂದು ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಹೋಗಿ ಮನೆಗೆ ಕರೆದುಕೊಂಡು ಹೋಗುವುದಾಗಿ ವೀಣಾರನ್ನು ಕಾಡಿಗೆ ಕರೆದೊಯ್ದು ಕೊಲೆ ಮಾಡಿ ಶವದ ಗುರುತು ಸಿಗದಂತೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ನಂತರ ನಾಪತ್ತೆಯಾಗಿರುವ ಪತ್ನಿ ಹುಡುಕಾಡಿದಂತೆ ನಾಟಕ ಮಾಡಿ ಪೊಲೀಸರಿಗೆ ದೂರು ನೀಡಿದ್ದಾನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read