ಬೆಂಗಳೂರು: ನಡುರಸ್ತೆಯಲ್ಲಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ಶಾರದಾ (35) ಮೃತ ಮಹಿಳೆ. ಬಾಗೆಪಲ್ಲಿ ಮೂಲದವರು. ಪತಿ ಕೃಷ್ಣ ಪತ್ನಿಯನ್ನೇ ಕೊಂದ ವ್ಯಕ್ತಿ. ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕು ಇರಿದು, ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಆಗ್ನೇಯ ಡಿಸಿಪಿ ಸಾರ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.