HomeLive NewsBIG NEWS: ಹಬ್ಬದ ಸಂದರ್ಭದಲ್ಲೇ ಘೋರ ಘಟನೆ: ಪತ್ನಿ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಸಾಫ್ಟ್ ವೇರ್...

BIG NEWS: ಹಬ್ಬದ ಸಂದರ್ಭದಲ್ಲೇ ಘೋರ ಘಟನೆ: ಪತ್ನಿ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಸಾಫ್ಟ್ ವೇರ್ ಇಂಜಿನಿಯರ್

ಚಂಡೀಗಢ: ಪತ್ನಿ ಹತ್ಯೆಗೈದು ಸಾಫ್ಟ್ ವೇರ್ ಇಂಜಿನಿಯರ್ ಓರ್ವ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ಅಜಯ್ ಕುಮಾರ್ (30) ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾಗಿರುವ ಪತಿ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಿವಾಸಿಯಾಗಿರುವ ಅಜಯ್ ಕುಮಾರ್, ಪಶ್ಚಿಮ ಬಂಗಾಳ ಮೂಲದ ಸ್ಈಟಿ ಶರ್ಮಾಳನ್ನು ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದ. ಇಬ್ಬರೂ ಗುರುಗ್ರಾಮದಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಸ್ನೇಹಿತನಿಗೆ ವಿಡಿಯೋ ಕಾಲ್ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅಜಯ್ ಕುಮಾರ್ ಹೇಳಿದ್ದ. ಹೀಗೆ ಹೇಳಿದವನೇ ಪತ್ನಿಯನ್ನು ಕೊಲೆಗೈದು ತಾನೂ ಸಾವಿಗೆ ಶರಣಾಗಿದ್ದಾನೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಅಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular