HomeCrimeದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ನಿದ್ದೆ ಮಾತ್ರೆ ಹಾಕಿ ಪತಿ ಕೊಲೆ

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ನಿದ್ದೆ ಮಾತ್ರೆ ಹಾಕಿ ಪತಿ ಕೊಲೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಯಗಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ ಮಾಡಿದ್ದಾಳೆ.

ನವೀನ್ ಮೃತಪಟ್ಟ ವ್ಯಕ್ತಿ: ಚಿಕ್ಕಮಗಳೂರು ಜಿಲ್ಲೆ ಹನುಮನಹಳ್ಳಿ ನಿವಾಸಿ ನವೀನ್ ಗೆ ಊಟದಲ್ಲಿ ನಿದ್ದೆ ಮಾತ್ರೆ ಹಾಕಿದ ಪತ್ನಿ ಪಾವನಾ ಕೊಲೆ ಮಾಡಿದ್ದಾಳೆ. ಆಗಸ್ಟ್ 6 ರಂದು ಯಗಟಿ ಕೆರೆ ಸಮೀಪ ನವೀನ್ ಮೃತದೇಹ ಪತ್ತೆಯಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದು ಸಹಜ ಸಾವಲ್ಲ, ನವೀನ್ ನನ್ನು ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಲಾಗಿತ್ತು. ನವೀನ್ ಪೋಷಕರು ಯಗಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸ್ ತನಿಖೆಯಲ್ಲಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರಿಯಕರ ಸಂಜಯ್ ಜೊತೆ ಸೇರಿ ಪಾವನಾ ತನ್ನ ಗಂಡ ನವೀನ್ ಗೆ ನಿದ್ದರೆ ಮಾತತ್ರೆ ಕೊಟ್ಟು ಕೊಲೆ ಮಾಡಿದ್ದಾಳೆ. ನಂತರ ಬೈಕ್ ನಲ್ಲಿ ಶವ ತಂದು ಕೆರೆಗೆ ಎಸೆದಿದ್ದಾರೆ. ಆರೋಪಿಗಳಾದ ಪಾವನಾ ಸಂಜಯ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕಡೂರು ತಾಲೂಕಿನ ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular