HomeKarnatakaನೇಣಿಗೆ ಶರಣಾದ ಪೊಲೀಸ್ ಕಾನ್ ಸ್ಟೆಬಲ್ ಪತ್ನಿ: ವರದಕ್ಷಿಣೆ ಕಿರುಕುಳ ಆರೋಪದಡಿ ದೂರು

ನೇಣಿಗೆ ಶರಣಾದ ಪೊಲೀಸ್ ಕಾನ್ ಸ್ಟೆಬಲ್ ಪತ್ನಿ: ವರದಕ್ಷಿಣೆ ಕಿರುಕುಳ ಆರೋಪದಡಿ ದೂರು

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಪತ್ನಿ ನೇಣಿಗೆ ಶರಣಾಗಿದ್ದಾರೆ. ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೆಚ್ಎಎಲ್ ಪೊಲೀಸ್ ಠಾಣೆಯ ಕಾನ್ಸ್ ಸ್ಟೆಬಲ್ ರಾಜೇಶ್ ಆರಾಧ್ಯ ಪತ್ನಿ ಲಕ್ಷ್ಮಿಪ್ರಿಯಾ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ರಾಜೇಶ್ -ಲಕ್ಷ್ಮಿಪ್ರಿಯಾ ದಂಪತಿಗೆ ಎಂಟು ತಿಂಗಳ ಮಗುವಿದೆ.

ತಂದೆ, ತಾಯಿಗೆ ಮರ್ಯಾದೆ ಕೊಡಲ್ಲವೆಂದು ಪತ್ನಿಗೆ ರಾಜೇಶ್ ಬೈದಾಡಿದ್ದ. ಇದೇ ಕಾರಣಕ್ಕೆ ಪತಿ ಕೆಲಸಕ್ಕೆ ತೆರಳಿದ್ದಾಗ ಲಕ್ಷ್ಮಿಪ್ರಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಆರ್ ಪುರಂ ಠಾಣೆಯಲ್ಲಿ ಪತಿ ರಾಜೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಲಕ್ಷ್ಮಿ ಪ್ರಿಯ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಕೇಸು ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತಿ ರಾಜೇಶ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದಡಿ ದೂರು ನೀಡಲಾಗಿದೆ. 2023ರಲ್ಲಿ ಮೈಸೂರಿನಲ್ಲಿ ಮದುವೆಯಾಗಿತ್ತು. ಪತಿ ರಾಜೇಶ್ ಮತ್ತು ಕುಟುಂಬ ಸದಸ್ಯರು ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಲಕ್ಷ್ಮಿ ಪ್ರಿಯಾಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಪತಿ ರಾಜೇಶ್ ಆರಾಧ್ಯ ಮತ್ತು ಕುಟುಂಬ ಸದಸ್ಯರ ವಿರುದ್ಧ ಠಾಣೆಗೆ ದೂರು ನೀಡಲಾಗಿದೆ. ಲಕ್ಷ್ಮಿಪ್ರಿಯಾ ಪೋಷಕರು ನೀಡಿದ ದೂರಿನ ಅನ್ವಯ ಕೆಆರ್ ಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular