ಚಿಕ್ಕಬಳ್ಳಾಪುರ: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ನವವಿವಾಹಿತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ನಡೆದಿದೆ.
ಇಲ್ಲಿನ ಕೊಂಡಾವಲಹಳ್ಳಿಯಲ್ಲಿ ಈ ಘಟನೆ ನಡೆದಿದೆ. 26 ವರ್ಷದ ಕೆ.ಎನ್.ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ. 6 ತಿಂಗಳ ಹಿಂದಷ್ಟೇ ಜಯಶ್ರೀ ಹಾಗೂ ಚಂದ್ರಶೇಖರ್ ವಿವಾಹವಾಗಿತ್ತು. ಆದರೆ ಪತಿ ಚಂದ್ರಶೇಖರ್ ಬೇರೊಂದು ಯುವತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಅಲ್ಲದೇ ಯುವತಿ ಜೊತೆ ಸದಾಕಾಲ ಚಾಟಿಂಗ್ ನಲ್ಲಿ ತೊಡಗಿರುತ್ತಿದ್ದ. ಇದನ್ನು ಪತ್ನಿ ಪ್ರಶ್ನೆ ಮಾಡಿದ್ದಕ್ಕೆ ಪತಿ ಕಿರುಕುಳ ನೀಡುತ್ತಿದ್ದ. ಇದರಿಂದ ನೊಂದ ಪತ್ನಿ ಡೆತ್ ನೋಟ್ ಬರೆದಿಟ್ಟು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಂದ್ರಶೇಖರ್ ನನ್ನು ಬಂಧಿಸುವವರೆಗೂ ಶವ ಸಂಸ್ಕಾರ ಮಾಡಲ್ಲ ಎಂದು ಜಯಶ್ರೀ ಪೋಷಕರು ಪಟ್ಟು ಹಿಡಿದಿದ್ದಾರೆ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.