HomeLatest NewsBIG NEWS: ಮಚ್ಚಿನಿಂದ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ: ಇಂತಹ ತಂದೆ ನಮಗೆ ಬೇಡ ಎಂದು...

BIG NEWS: ಮಚ್ಚಿನಿಂದ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ: ಇಂತಹ ತಂದೆ ನಮಗೆ ಬೇಡ ಎಂದು ಕಣ್ಣೀರಿಟ್ಟ ಮಗಳು

ಬೆಂಗಳೂರು: ಹೆಂಡತಿ ಮೇಲಿನ ಅನುಮಾನಕ್ಕೆ ಪತಿ ಮಹಾಶಯ ಆಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘೋರ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಗೋವಿಂದರಾಜನಗರದಲ್ಲಿ ಈ ಘಟನೆ ನಡೆದಿದೆ. ಚಾಲಕನೊಂದಿಗೆ ಮಾತನಾಡಿದ್ದಕ್ಕೆ ಅನುಮಾನಗೊಂಡ ಪತಿ, ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ದೇವಿಕಾ(50) ಮೃತ ಮಹಿಳೆ. ಕುಮಾರ್ ಪತ್ನಿಯನ್ನೇ ಕೊಂದ ಪತಿ. ಇತ್ತೀಚೆಗೆ ಕುಟುಂಬ ಸಮೇತ ಕೇರಳ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದೇವಿಕಾ ಚಾಲಕನ ಜೊತೆ ಮಾತನಾಡಿದ್ದರು. ಇದರಿಂದ ಅನುಮಾನಗೊಂಡಿದ್ದ ಕುಮಾರ್​​, ರಾತ್ರಿ ಪತ್ನಿ ಮಲಗಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಕೂಡಲೇ ಆತನನ್ನ ಮಕ್ಕಳು ತಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪುತ್ರಿ ಶಾಲಿನಿ, ನಮ್ಮ ತಂದೆ-ತಾಯಿ ಮದುವೆ ಆಗಿ 40 ವರ್ಷ ಆಗಿದೆ. ಈ ಮೊದಲು ನಮ್ಮ ತಂದೆ ಈ ರೀತಿ ಇರಲಿಲ್ಲ. ಕಳೆದ ಒಂದು ತಿಂಗಳಿಂದ ಅನುಮಾನಗೊಂಡು ಜಗಳವಾಡುತ್ತಿದ್ದ. ಮಲಗಿದ್ದಾಗಲೇ ನಮ್ಮ ತಾಯಿಯನ್ನ ಕೊಚ್ಚಿ ಕೊಲೆ ಮಾಡಿದ್ದಾನೆ. ಈ ಪರಿಸ್ಥಿತಿ ಯಾರಿಗೂ ಬರಬಾರದು. ಕೊಲೆ ಮಾಡಿದ ಬಳಿಕ ಆತ ನಮ್ಮ ತಮ್ಮನಿಗೆ ಫೋನ್ ಮಾಡಿ ನಿಮ್ಮ ತಾಯಿಯನ್ನ ಕೊಂದಿದ್ದೀನಿ ಎಂದು ಹೇಳಿದ್ದಾನೆ. ತಾನು ಕೂಡ ನೇಣು ಹಾಕಿಕೊಳ್ತೇನೆ ಬನ್ನಿ ಎಂದಿದ್ದಾನೆ. ಹೀಗಾಗಿ ವಿಚಾರ ಪೊಲೀಸರಿಗೆ ತಿಳಿಸಿ ಕೂಡಲೇ ಸ್ಥಳಕ್ಕೆ ಹೋದೆವು. ಅಷ್ಟರಲ್ಲಿ ತಾಯಿ ಸಾವನ್ನಪ್ಪಿದ್ದರು ಎಂದು ತಿಳಿಸಿದ್ದಾರೆ

ನಮಗೆ ಇಂತಹ ತಂದೆ ಬೇಡ. ಆತನಿಗೆ ಜಾಮೀನು ಕೊಡಿಸಲು ನಾವು ಹೋಗಲ್ಲ. ಕ್ಷುಲ್ಲಕ ಕಾರಣಕ್ಕೆ ತಾಯಿಯನ್ನೇ ಮುಗಿಸಿದ್ದಾನೆ ಎಂದು ಮಗಳು ಕಣ್ಣೀರಿಟ್ಟಿದ್ದಾಳೆ.

ಸದ್ಯ ಕೊಲೆ ಆರೋಪಿ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದು, ಗೋವಿಂದರಾಜನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular