ಫೇಸ್ಬುಕ್ ಲೈವ್ ನಲ್ಲಿ ಪತ್ನಿ ಕೊಲೆ ಪ್ರಕರಣ ; ಕಟ್ಟಡದಿಂದ ಬಿದ್ದು ಪಾಪಿ ಪತಿ ಸಾವು..!

ಬೆಂಗಳೂರು: ಫೇಸ್ ಬುಕ್ ಲೈವ್ ನಲ್ಲೇ ಪಾಪಿ ಪತಿಯೋರ್ವ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿತ್ತು. ತಬರೇಜ್ ಎಂಬಾತ ಫಾಜಿಲಾ ಎಂಬ ಮಹಿಳೆಯನ್ನು ಬರ್ಬರವಾಗಿ ಕೊಂದಿದ್ದನು.

ಇದೀಗ ಕೊಲೆ ಮಾಡಿದ ತಬರೇಜ್ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಕೊಲೆ ನಡೆದ 5 ದಿನದ ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಟ್ಟಡದಿಂದ ಜಿಗಿದಿದ್ದಾನೆ. ಕೋಲಾರದ ಚಿಕ್ಕಮ್ಮನ ಮನೆಗೆ ತೆರಳಿ ತಲೆಮರೆಸಿಕೊಂಡಿದ್ದ ತಬರೇಜ್ ನನ್ನು ಬಂಧಿಸಲು ಪೊಲೀಸರು ಧಾವಿಸಿದಾಗ ಅವರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಟ್ಟಡದಿಂದ ಜಿಗಿದಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ತಬರೇಜ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

9 ವರ್ಷಗಳ ಹಿಂದೆ ಫಾಜಿಲಾ ಹಾಗೂ ತಬರೇಜ್ ವಿವಾಹವಾಗಿದ್ದರು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಪತಿ-ಪತ್ನಿ ನಡುವೆ ವೈಮನಸ್ಸು ಹೆಚ್ಚಾದ ಹಿನ್ನೆಲೆಯಲ್ಲಿ ಫಾಜಿಲಾ ಮಕ್ಕಳೊಂದಿಗೆ ತವರಿಗೆ ಬಂದಿದ್ದಳು. ಎಂದಿನಂತೆ ಮಕ್ಕಳು ಶಾಲೆಗೆ ಹೋಗಿದ್ದ ವೇಳೆ ಮನೆಗೆ ನುಗ್ಗಿದ ತಬರೇಜ್, ಪತ್ನಿ ಜೊತೆ ಜಗಳವಾಡಿದ್ದಾನೆ. ನಂತರ ಫೇಸ್ ಬುಕ್ ಲೈವ್ ಮಾಡುತ್ತಲೇ ಚಾಕುವನ್ನು ತೆಗೆದು ಪತ್ನಿಗೆ ಮನಬಂದಂತೆ ಇರಿದು ಹತ್ಯೆ ಮಾಡಿದ್ದಾನೆ. ಕೃತ್ಯದ ಬಳಿಕ ತನಗೆ ಏನು ಗೊತ್ತಿಲ್ಲದವನಂತೆ ಮನೆಯಿಂದ ಹೊರಗೆ ತೆರಳಿ ಪರಾರಿಯಾಗಿದ್ದರು.ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read